ಟೈಗರ್ ಶ್ರಾಫ್ ಕಾರಿನ ಮೇಲೆ ದಾಳಿ ಪ್ರಕರಣ : ಇಬ್ಬರು ಮಹಿಳೆಯರು ಸೇರಿ ಮತ್ತೆ ನಾಲ್ವರ ಬಂಧನ – vishwanews24

Featured, ರಾಷ್ಟ್ರ ನ್ಯೂಸ್

ಟೈಗರ್ ಶ್ರಾಫ್ ಕಾರಿನ ಮೇಲೆ ದಾಳಿ ಪ್ರಕರಣ : ಇಬ್ಬರು ಮಹಿಳೆಯರು ಸೇರಿ ಮತ್ತೆ ನಾಲ್ವರ ಬಂಧನ

ಮುಂಬೈ: ಬಾಲಿವುಡ್ ನಟ ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡಿನ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರು ಸೇರಿ ಮತ್ತೆ ನಾಲ್ವರನ್ನು ದೆಹಲಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಬಂಧಿತ ಆರೋಪಿಗಳನ್ನು ಕುನಾಲ್ (21), ಸುಮಿತ್ (19), ರಾಧಾ (23) ಮತ್ತು ಬಬಿತಾ (23) ಎಂದು ಗುರುತಿಸಲಾಗಿದೆ. ದೆಹಲಿ ಪೊಲೀಸ್ ಸ್ಪೆಷಲ್ ಸೆಲ್ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರನ್ನು ಬಂಧಿಸಿದ್ದು, ಈ ಪೈಕಿ ಅಪ್ರಾಪ್ತ ಬಾಲಕಿಯೊಬ್ಬಳನ್ನು ಕೂಡ ವಶಕ್ಕೆ ಪಡೆಯಲಾಗಿದೆ.

ಪೊಲೀಸ್ ಮೂಲಗಳ ಪ್ರಕಾರ, ಬಂಧಿತ ಆರೋಪಿಗಳು ಸೋನಿಪತ್ ಮತ್ತು ದೆಹಲಿಯವರಾಗಿದ್ದು, ಇಬ್ಬರು ಯುವಕರು ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಿ ಮಹಿಳೆಯರಿಗೆ ಹಸ್ತಾಂತರಿಸಿದ್ದರು. ನಂತರ ಮಹಿಳೆಯರು ಮುಂಬೈಗೆ ಪ್ರಯಾಣ ಬೆಳೆಸಿ ತಮ್ಮ ಸದಸ್ಯರಿಗೆ ಶಸ್ತ್ರಾಸ್ತ್ರಗಳನ್ನು ತಲುಪಿಸುತ್ತಿದ್ದರು ಎಂದು ತಿಳಿಸಿದ್ದಾರೆ.

ದೆಹಲಿ ಪೊಲೀಸ್ ಸ್ಪೆಷಲ್ ಸೆಲ್ ಪ್ರಕಾರ, ನವದೆಹಲಿ ರೇಂಜ್ ಘಟಕದಿಂದ ಆರೋಪಿಗಳನ್ನು ಬಂಧಿಸಲಾಗಿದ್ದು, ಬಿಎನ್‌ಎಸ್‌ಎಸ್ 35(1)(ಬಿ) ಅಡಿಯಲ್ಲಿ ಬಂಧಿಸಲು ಅನುಮತಿ ಕೋರಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು. ನ್ಯಾಯಾಲಯ ಅರ್ಜಿ ಪುರಸ್ಕರಿಸಿದ ಬಳಿಕ ಮುಂಬೈ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

 

Leave a Reply