ಟ್ರಾಫಿಕ್ ಪೊಲೀಸರ ಎಡವಟ್ಟು : ಮೂರೂವರೆ ವರ್ಷದ ಮಗು ಸಾವು – vishwanews24

Featured, ರಾಜ್ಯ ನ್ಯೂಸ್

ಟ್ರಾಫಿಕ್ ಪೊಲೀಸರ ಎಡವಟ್ಟು : ಮೂರೂವರೆ ವರ್ಷದ ಮಗು ಸಾವು

ಮಂಡ್ಯ: ನಗರದಲ್ಲಿ ಟ್ರಾಫಿಕ್ ಪೊಲೀಸರ ಎಡವಟ್ಟಿಗೆ ಮೂರೂವರೆ ವರ್ಷದ ಮಗು ಪ್ರಾಣ ಕಳೆದುಕೊಂಡ ಘಟನೆ ಸ್ವರ್ಣಸಂದ್ರ ಬಳಿಯ ಹಳೇ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ.

ಜಿಲ್ಲೆಯ ಮದ್ದೂರು ತಾಲೂಕಿನ ಗೊರವನಹಳ್ಳಿ ನಿವಾಸಿಗಳಾದ ಅಶೋಕ್, ವಾಣಿ ದಂಪತಿಯ ಪುತ್ರಿ ಹೃತೀಕ್ಷಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಹೃತೀಕ್ಷಾಗೆ ನಾಯಿ ಕಚ್ಚಿದ್ದರಿಂದ ತಂದೆ, ತಾಯಿ ಬೈಕ್​ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದರು. ಹೆಲ್ಮೆಟ್ ತಪಾಸಣೆಗಾಗಿ ಸ್ವರ್ಣಸಂದ್ರ ಬಳಿ ಸಂಚಾರಿ ಠಾಣೆ ಪೊಲೀಸರು ಬೈಕ್ ಅಡ್ಡಗಟ್ಟಿದ್ದಾರೆ. ಹೀಗಾಗಿ ಮಗು ಸೇರಿದಂತೆ ದಂಪತಿ ಆಯಾ ತಪ್ಪಿ ಬಿದಿದ್ದಾರೆ. ಈ ವೇಳೆ ಮಗುವಿನ ತಲೆಗೆ ಬಲವಾದ ಪೆಟ್ಟು ಬಿದ್ದು, ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದೆ.

ಅತ್ಯಾಚಾರ ಪ್ರಕರಣ : ಕಿರುತೆರೆ ನಟ ಮಡೇನೂರು ಮನು ಗೆ 14 ದಿನ ನ್ಯಾಯಾಂಗ ಬಂಧನ – vishwanews24

ಮಗುವನ್ನು ಮಡಿನಲ್ಲಿ ಇಟ್ಟುಕೊಂಡು ರಸ್ತೆಯಲ್ಲೇ ಪೋಷಕರು ಗೋಳಾಡಿದ್ದಾರೆ. ಘಟನೆ ಕಣ್ಣಾರೆ ಕಂಡು ಸಾರ್ವಜನಿಕರು ದಿಗ್ಭ್ರಮೆಗೊಂಡಿದ್ದಾರೆ. ಸಂಚಾರಿ ಪೊಲೀಸರ ವಿರುದ್ಧ ಸ್ಥಳೀಯರು ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Leave a Reply