ಡಿಕೆಶಿ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿ ವಜಾ ಮಾಡಿದ ಹೈಕೋರ್ಟ್ -Vishwanews24
ಬೆಂಗಳೂರು :ಡಿಕೆಶಿ ಅವರು ನೀಡಿದ್ದ ಮಧ್ಯಂತರ ಜಾಮೀನು ಅರ್ಜಿಯವನ್ನು ಹೈಕೋರ್ಟ್ ವಜಾ ಮಾಡಿದೆ.
ಜಾರಿಗೊಳಿಸಿದ್ದ ಸಮನ್ಸ್ ಗೆ ಸಂಬಂಧಿಸಿದಂತೆ ಮಧ್ಯಂತರ ರಕ್ಷಣೆ ನೀಡಬೇಕೆಂದು ಕೋರಿ ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಡಿಕೆ ಶಿವಕುಮಾರ್ ಮಧ್ಯಂತರ ರಕ್ಷಣೆ ನೀಡಬೇಕೆಂದು ಕೋರಿ ಸಲ್ಲಿಸಿದ್ದ ಮೇಲ್ಮವಿಯನ್ನು ಹೈಕೋರ್ಟ್ ಪೀಠ ಶುಕ್ರವಾರ ವಜಾಗೊಳಿಸಿದೆ. ಪ್ರಕರಣದ ಎಲ್ಲಾ ಅಂಶ ಪರಿಗಣಿಸಿ ನಿನ್ನೆಯೇ ತೀರ್ಪು ನೀಡಲಾಗಿದೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.
ಜಾರಿ ನಿರ್ದೇಶನಾಲಯ ಜಾರಿಗೊಳಿಸಿದ್ದ ಸಮನ್ಸ್ ರದ್ದುಗೊಳಿಸುವಂತೆ ಕೋರಿ ಡಿಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಗುರುವಾರ ವಜಾಗೊಳಿಸಿತ್ತು. ಇದರೊಂದಿಗೆ ಡಿಕೆ ಶಿವಕುಮಾರ್ ಗೆ ಬಂಧನ ಭೀತಿ ಎದುರಾಗಿತ್ತು. ಏತನ್ಮಧ್ಯೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಗುರುವಾರ ರಾತ್ರಿ ಸದಾಶಿವ ನಗರದಲ್ಲಿರುವ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ತೆರಳಿ ಶುಕ್ರವಾರವೇ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದರು.
ಹೈಕೋರ್ಟ್ ಆದೇಶದ ಪ್ರತಿ ನಮಗಿನ್ನೂ ಸಿಕ್ಕಿಲ್ಲ, ಸಿಕ್ಕಿದ ಮೇಲೆ ಮೇಲ್ಮನವಿ ಸಲ್ಲಿಸುತ್ತೇವೆ ಎಂದು ಡಿಕೆ ಶಿವಕುಮಾರ್ ಪರ ವಕೀಲರಾದ ಬಿವಿ ಆಚಾರ್ಯ ವಾದಿಸಿದ್ದರು. ಈಗಾಗಲೇ ತೀರ್ಪಿನ ಪ್ರತಿ ವೆಬ್ ಸೈಟಿನಲ್ಲಿ ಪ್ರಕಟಿಸಿದ್ದೇವೆ. ನೀವು ಇಂದೇ ಮೇಲ್ಮನವಿ ಸಲ್ಲಿಸಬಹುದು ಎಂದು ಹೈಕೋರ್ಟ್ ನ್ಯಾ.ಅರವಿಂದ್ ಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದ್ದರು.
