ಡಿಕೆ ಶಿವಕುಮಾರ್ ಅವರ ನ್ಯಾಯಾಂಗ ಬಂಧನ ಅಕ್ಟೋಬರ್ 15 ರವರೆಗೆ ವಿಸ್ತರಣೆ -Vishwanews24
ನವದೆಹಲಿ,:ಜಾರಿ ನಿದೇರ್ಶನಾಲಯ(ಜಾರಿ) ಅಧಿಕಾರಿಗಳಿಂದ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ನ್ಯಾಯಾಂಗ ಬಂಧನದ ಅವಧಿ ಅಕ್ಟೋಬರ್ 15ರವರೆಗೆ ವಿಸ್ತರಣೆಯಾಗಿದೆ.
ಇಂದು ನ್ಯಾಯಾಂಗ ಬಂಧನ ಅಂತ್ಯಗೊಂಡ ಹಿನ್ನೆಲೆಯಲ್ಲಿ ಅವರನ್ನು ಇ.ಡಿ.ಕೋರ್ಟ್ಗೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಧೀಶ ಅಜಯ್ಕುಮಾರ್ ಕುಹರ್ ಅವರು ಡಿ.ಕೆ.ಶಿವಕುಮಾರ್ ಅವರ ನ್ಯಾಯಾಂಗ ಬಂಧನದ ಅವಧಿ ವಿಸ್ತರಿಸಿ ಆದೇಶ ಹೊರಡಿಸಿದ್ದಾರೆ.
ಡಿಕೆಶಿ ಅವರಿಗೆ ಜಾಮೀನು ನೀಡುವ ಕುರಿತು, ಇಡಿ ಪರ ವಾದ ಮಂಡಿಸಿದ ವಕೀಲ ನಾಗರಾಜ್, “ನ್ಯಾಯಾಂಗ ಬಂಧನದ ವೇಳೆ ಡಿಕೆಶಿ ವಿಚಾರಣೆಗೆ ಸಹಕಾರ ನೀಡಿಲ್ಲ. ಅನಾರೋಗ್ಯದ ನೆಪವೊಡ್ಡಿ ಪದೇ ಪದೇ ಆಸ್ಪತ್ರೆ ಸೇರಿದ್ದರು. ಪರಿಣಾಮ ಸಂಪೂರ್ಣ ವಿಚಾರಣೆ ಸಾಧ್ಯವಾಗಿಲ್ಲ. ಹೀಗಾಗಿ ಅವರನ್ನು ಮತ್ತಷ್ಟು ದಿನ ನ್ಯಾಯಾಂಗ ಬಂಧನಕ್ಕೆ ಒಪಡಿಸಬೇಕು” ಎಂದು ಮನವಿ ಮಾಡಿಕೊಂಡರು.
ಬಂಧನದ ವೇಳೆ ಕುಟುಂಬಸ್ಥರ ಭೇಟಿಗೆ ಅವಕಾಶ ನೀಡಿರುವ ನ್ಯಾಯಾಲಯ, ಮುಂದಿನ ಎರಡು ವಾರಗಳ ಕಾಲ ಡಿಕೆಶಿ ಜೈಲಿನಲ್ಲೇ ಕಳೆಯುವಂತಹ ತೀರ್ಪು ನೀಡಿದೆ.ಜಾಮೀನು ಕೋರಿ ಹೈಕೋರ್ಟ್ಗೆ ಮನವಿ ಮಾಡಿದ್ದರೂ ಅದರ ತುರ್ತು ವಿಚಾರಣೆ ಸಾಧ್ಯವಿಲ್ಲ ಎಂದು ನ್ಯಾಯಾಲಯ ತಿಳಿಸಿದೆ.
