ಡಿ. 21ಕ್ಕೆ ವಿಧಾನಪರಿಷತ್ ಸಭಾಪತಿ ಚುನಾವಣೆ: ನಾಳೆ ಬಸವರಾಜ ಹೊರಟ್ಟಿ ನಾಮಪತ್ರ ಸಲ್ಲಿಕೆ – Vishwanews24
ಡಿ. 21ಕ್ಕೆ ವಿಧಾನಪರಿಷತ್ ಸಭಾಪತಿ ಚುನಾವಣೆ: ನಾಳೆ ಬಸವರಾಜ ಹೊರಟ್ಟಿ ನಾಮಪತ್ರ ಸಲ್ಲಿಕೆ
ಬೆಳಗಾವಿ: ವಿಧಾನಪರಿಷತ್ ಸಭಾಪತಿ ಚುನಾವಣೆ ಡಿಸೆಂಬರ್ 21ಕ್ಕೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನಾಳೆ ಮಧ್ಯಾಹ್ನ ಬಸವರಾಜ ಹೊರಟ್ಟಿ ನಾಮಪತ್ರ ಸಲ್ಲಿಸಲಿದ್ದಾರೆ.
ಬೆಳಗಾವಿಯ ವಿಧಾನಪರಿಷತ್ ನ ಸಭಾಂಗಣದ ಬಳಿ ಬಿಜೆಪಿ ಸದಸ್ಯರ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಬಸವರಾಜ ಹೊರಟ್ಟಿ ಸೇರಿ ಬಿಜೆಪಿಯ ಎಲ್ಲಾ ಸದಸ್ಯರು ಭಾಗಿಯಾಗಿದ್ದರು. ನಾಳೆ ಮಧ್ಯಾಹ್ನ 2 ಗಂಟೆವರೆಗೆ ನಾಮಪತ್ರ ಸಲ್ಲಿಸಲು ಅವಕಾಶ ಇರಲಿದೆ.ಬೆಳಗಾವಿಯ ಸುವರ್ಣ ಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭವಾಗಿದೆ.ಬೆಳಗಾವಿ ಅಧಿವೇಶನದಲ್ಲಿ ಡಿಸೆಂಬರ್ 21ರಂದು ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು ಬಸವರಾಜ ಹೊರಟ್ಟಿಯವರು ನಾಳೆ ಮಧ್ಯಾಹ್ನ ನಾಮಪತ್ರ ಸಲ್ಲಿಸಲಿದ್ದಾರೆ.
ಡಿ ಕೆ ಶಿವಕುಮಾರ್ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ CBI ದಾಳಿ – Vishwanews24
