ಡಿ.8 ರ ಭಾರತ್ ಬಂದ್ ಗೆ ಬೆಂಬಲ ಸೂಚಿಸಿದ ಉಡುಪಿ ಜಿಲ್ಲಾ ಕಾಂಗ್ರೆಸ್ -Vishwanews24
ಡಿ.8 ರ ಭಾರತ್ ಬಂದ್ ಗೆ ಬೆಂಬಲ ಸೂಚಿಸಿದ ಉಡುಪಿ ಜಿಲ್ಲಾ ಕಾಂಗ್ರೆಸ್ -Vishwanews24
ಉಡುಪಿ : ಕೇಂದ್ರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಡಿ.8 ರಂದು ರೈತ ಸಂಘಟನೆಗಳು ಹಮ್ಮಿಕೊಂಡ ಭಾರತ್ ಬಂದ್‌ಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಸಂಪೂರ್ಣ ಬೆಂಬಲ ಸೂಚಿಸಿದೆ.
ನೂತನ ಕೃಷಿ ಕಾಯಗಳ ರದ್ದತಿಗೆ ಆಗ್ರಹಿಸಿ ಕಳೆದ ಹನ್ನೊಂದು ದಿನಗಳಿಂದ ದಿಲ್ಲಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಬೆಂಬಲವಾಗಿ ಒಟ್ಟು 40ಕ್ಕೂ ಹೆಚ್ಚು ರೈತ ಸಂಘಟನೆಗಳು ಸಂಪೂರ್ಣ ಬಂದ್‌ಗೆ ಕರೆ ನೀಡಿದ್ದು ಎಲ್ಲಾ ವಿಪಕ್ಷಗಳು ಬೆಂಬಲ ಸೂಚಿಸಿವೆ.
ರೈತರ ಬೇಡಿಕೆಗಳಿಗೆ ಒಪ್ಪಿಗೆ ನೀಡಲು ಕೇಂದ್ರ ಸರಕಾರ ಮೀನಮೇಷ ಎಣಿಸುತ್ತಿದೆ. ದೇಶದಲ್ಲಿ ಕೃಷಿ ಉತ್ಪಾದನೆಯನ್ನು ಸುಸ್ಥಿತಿಯಲ್ಲಿಡಲು ಸರಕಾರ ಕನಿಷ್ಠ ಬೆಂಬಲ ಬೆಲೆಯನ್ನು ಘೋಷಿಸಬೇಕು. ಏಕೆಂದರೆ ದರ ಕುಸಿತಕ್ಕೀಡಾದಾಗ ರೈತರು ಸಂಕಷ್ಯಕ್ಕೀಡಾಗಿ ಉತ್ಪಾದನೆಯಿಂದ ವಿಮುಖರಾಗುತ್ತಾರೆ. ಇದು ಆಹಾರ ಭದ್ರತೆಗೆ ಧಕ್ಕೆ ತರಬಹುದು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಅಶೋಕ್ ಕುಮಾರ್ ಕೊಡವೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
