ಡೆತ್ನೋಟ್ ಬರೆದಿಟ್ಟು ನವ ವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ – vishwanews24
ಡೆತ್ನೋಟ್ ಬರೆದಿಟ್ಟು ನವ ವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ
ಗದಗ: ಡೆತ್ನೋಟ್ ಬರೆದಿಟ್ಟು ನವ ವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಬೆಟಗೇರಿ ಶರಣ ಬಸವೇಶ್ವರ ನಗರದಲ್ಲಿ ನಡೆದಿದೆ.
ಪೂಜಾ ಅಮರೇಶ ಅಯ್ಯನಗೌಡರ್(27) ಮೃತ ಮಹಿಳೆ. ಪೂಜಾ, ಡೆತ್ನೋಟ್ ಬರೆದಿಟ್ಟು ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪೂಜಾಗೆ ಅತ್ತೆ ಶಶಿಕಲಾ, ಬಾವ ವೀರನಗೌಡ ಹಾಗೂ ಮಾವ ನಿತ್ಯ ಕಿರುಕುಳ ನೀಡುತ್ತಿದ್ದರು. ಆಕೆ ಸ್ವಲ್ಪ ಕಪ್ಪು ಇದ್ದುದರಿಂದ ಅತ್ತೆ ಅಪಹಾಸ್ಯ ಮಾಡುತ್ತಿದ್ದರು ಎಂದು ಪೂಜಾ ಕುಟುಂಬಸ್ಥರು ಆರೋಪಿಸಿದ್ದಾರೆ.
ಗಲಭೆಕೋರರಿಗೆ ದಂಡವೇ ಉತ್ತಮ ಮದ್ದು : ಬಂಗಾಳ ಹಿಂಸಾಚಾರಕ್ಕೆ ಯೋಗಿ ಆದಿತ್ಯನಾಥ್ ಖಂಡನೆ – vishwanews24
ಅಲ್ಲದೇ ಅತ್ತೆ, ಮಾವ, ಬಾವ ಒಟ್ಟಾಗಿ ಆಕೆಯನ್ನು ನೇಣು ಹಾಕಿರುವುದಾಗಿ ಕುಟುಂಬಸ್ಥರು ಆರೋಪಿಸಿ, ಬಾವ ವೀರನಗೌಡನಿಗೆ ಥಳಿಸಿದ್ದಾರೆ. ಸ್ಥಳದಲ್ಲಿ ಯುವತಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಪೂಜಾ, 4 ತಿಂಗಳ ಹಿಂದೆಯಷ್ಟೇ ಅಮರೇಶ ಎಂಬುವವರನ್ನು ಮದುವೆಯಾಗಿದ್ದರು. ಪತಿ ಅಮರೇಶ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದು, ಸೋಮವಾರವಷ್ಟೇ ಚೆನ್ನೈಗೆ ಕೆಲಸಕ್ಕೆ ತೆರಳಿದ್ದರು. ಸ್ಥಳಕ್ಕೆ ಬೆಟಗೇರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಬೆಟಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಏ.17ರಂದು ಮೋದಿ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಬೃಹತ್ ಪ್ರತಿಭಟನೆ: ಡಿ. ಬಸವರಾಜ್ – vishwanews24
