ಡ್ರಗ್ಸ್ ಪ್ರಕರಣ : ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ , ದೇಶದ ಇತಿಹಾಸದಲ್ಲಿಯೇ ಈ ರೀತಿ ಯಾರೂ ಕ್ರಮ ಕೈಗೊಂಡಿಲ್ಲ : ಬಿ ಎಸ್ ವೈ -Vishwanews24
ಡ್ರಗ್ಸ್ ಪ್ರಕರಣ : ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ , ದೇಶದ ಇತಿಹಾಸದಲ್ಲಿಯೇ ಈ ರೀತಿ ಯಾರೂ ಕ್ರಮ ಕೈಗೊಂಡಿಲ್ಲ : ಬಿ ಎಸ್ ವೈ -Vishwanews24
ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶದ ಇತಿಹಾಸದಲ್ಲಿಯೇ ಈ ರೀತಿ ಯಾರೂ ಕ್ರಮ ಕೈಗೊಂಡಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡ್ರಗ್ಸ್ ವಿಚಾರದಲ್ಲಿ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ. ಕೆಲವರ ಬಣ್ಣ ಈಗ ಬಯಲಾಗ್ತಿದೆ. ಹಿಂದಿನ ಸರ್ಕಾರ ಕಣ್ಮುಚ್ಚಿ ಕುಳಿತಿತ್ತು. ದೇಶದ ಇತಿಹಾಸದಲ್ಲಿ ಯಾರೂ ಕೂಡ ಈ ರೀತಿ ಕ್ರಮ ಕೈಗೊಂಡಿರಲಿಲ್ಲ. ಸಿಸಿಬಿ ತನಿಖೆ ಮಾಡ್ತಿದೆ. ಎಲ್ಲರ ಬಣ್ಣ ಬಯಲಾಗುತ್ತೆ ಎಂದು ತಿಳಿಸಿದರು.
ಡ್ರಗ್ಸ್ ಕೇಸ್ ಸಂಬಂಧ ತನಿಖೆ ಆಗ್ತಿದೆ. ಇದರಲ್ಲಿ ಯಾರನ್ನೂ ಸೇವ್ ಮಾಡುವ ಪ್ರಶ್ನೆಯೇ ಇಲ್ಲ. ದೇಶದ ಇತಿಹಾಸದಲ್ಲಿ ಕಳೆದ 10 ವರ್ಷಗಳಿಂದ ಈ ರೀತಿಯ ಘಟನೆ ನಡೆಯುತ್ತಿದ್ದರೂ ಹಿಂದಿನ ಸರ್ಕಾರಗಳು ಏನು ಕ್ರಮಗಳನ್ನು ಕೈಗೊಳ್ಳದೇ ಕೈಕಟ್ಟಿ ಕುಳಿತಿದ್ದವು. ಆದರೆ ಈ ಸಾರಿ ನಾವು ಆ ಬಗ್ಗೆ ಸಮಗ್ರವಾಗಿ ತನಿಖೆ ಮಾಡಿಸ್ತಿದ್ದೇವೆ ಎಂದರು.
