ತಮಿಳುನಾಡಿನಲ್ಲಿ ಸುಳಿಗಾಳಿ – ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ  – Vishwanews24

Featured, ಉಡುಪಿ, ದಕ್ಷಿಣ ಕನ್ನಡ, ರಾಷ್ಟ್ರ ನ್ಯೂಸ್

ತಮಿಳುನಾಡಿನಲ್ಲಿ ಸುಳಿಗಾಳಿ – ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ..

ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ  ಸೂಚನೆ..

ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಲ್ಲಲ್ಲಿ ಭಾರೀ ಮಳೆಯಾಗುತ್ತಿದೆ. ಇದೇ ವೇಳೆ ಪಕ್ಕದ ತಮಿಳುನಾಡು ರಾಜ್ಯದಿಂದ ಮಳೆಯ ಕುರಿತು ಮಹತ್ವದ ಸುದ್ದಿ ಹೊರಬಿದ್ದಿದೆ.

ತಮಿಳುನಾಡಿನ ಕರಾವಳಿ ಪ್ರದೇಶದಲ್ಲಿ ಸಮುದ್ರಮಟ್ಟದಿಂದ 1.5 ಮೇಲ್ಮಟ್ಟದಲ್ಲಿ ಮೇಲ್ಮೈ ಸುಳಿಗಾಳಿ ಸೃಷ್ಟಿಯಾಗಿದೆ. ಇದು ಬೆಂಗಳೂರು ಸೇರಿದಂತೆ ಕರ್ನಾಟಕದ ಮೇಲೆ ಪ್ರಭಾವ ಬೀರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಅಲ್ಲದೇ ಮೀನುಗಾರರಿಗೆ ಸಹ ಮುನ್ನೆಚ್ಚರಿಕೆ ನೀಡಿರುವ ಹವಾಮಾನ ಇಲಾಖೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಿದೆ.

ವಿಧಾನಸಭೆ ನೂತನ ಸ್ಪೀಕರ್ ಆಗಿ ಯು.ಟಿ. ಖಾದರ್ – Vishwanews24

ಮುಂದಿನ 5 ದಿನಗಳ ಕಾಲ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಮಂಡ್ಯ, ತುಮಕೂರು, ರಾಮನಗರ ಕೋಲಾರ, ಕೊಡಗು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ವಿಧಾನಸಭೆ ನೂತನ ಸ್ಪೀಕರ್ ಆಗಿ ಯು.ಟಿ. ಖಾದರ್ – Vishwanews24

Leave a Reply