ತಮ್ಮ ಪಕ್ಷದ ನಾಯಕರ ವಿರುದ್ಧ ಸಚಿವ ರಮೇಶ್ ಜಾರಕಿಹೊಳಿ ಗರಂ

Featured, ರಾಜ್ಯ ನ್ಯೂಸ್

ಬೆಂಗಳೂರು,:ಕಾಂಗ್ರೆಸ್‍ನ ಕೆಲವು ಪ್ರಭಾವಿ ನಾಯಕರು ನನ್ನ ಹೆಸರನ್ನು ಡ್ಯಾಮೇಜ್ ಮಾಡಲು ಷಡ್ಯಂತ್ರ ನಡೆಸುತ್ತಿದ್ದಾರೆ ..ನಾನು ಪಕ್ಷ ಬಿಟ್ಟು ಎಲ್ಲಿಯೂ ಹೋಗಿಲ್ಲ. ಹೋಗುವುದೂ ಇಲ್ಲ ನಮ್ಮ ಪಕ್ಷದ ಕೆಲವು ಸ್ವಯಂಘೋಷಿತ ನಾಯಕರೇ ನನ್ನ ವಿರುದ್ಧ ಷಡ್ಯಂತ್ರ ಮಾಡುತ್ತಿದ್ದಾರೆ ಎಂದು ಸಚಿವ ರಮೇಶ್ ಜಾರಕಿಹೊಳಿ ಸಿಡಿದೆದ್ದಾರೆ.

ಬೆಂಗಳೂರಿನ ಸೆವೆನ್ ಮಿನಿಸ್ಟರ್ ಕ್ವಾಟ್ರರ್ಸ್ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ನಗರದಲ್ಲಿಯೇ ಇದ್ದೇನೆ. ಎಲ್ಲಿಯೂ ಹೋಗಿಲ್ಲ. ಮುಂಬೈಗೂ ಹೋಗಿಲ್ಲ. ಡೆಲ್ಲಿಗೂ ಹೋಗಿಲ್ಲ ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲೇ ಇದ್ದೇನೆ. ನನ್ನ ಹೆಸರಿಗೆ ಮಸಿ ಬಳಿಯಲು ಕೆಲವರು ಈ ರೀತಿ ಷಡ್ಯಂತ್ರ ಮಾಡುತ್ತಿದ್ದಾರೆ ಎಂದು ಪರೋಕ್ಷವಾಗಿ ತಮ್ಮ ಪಕ್ಷದ ನಾಯಕರ ವಿರುದ್ಧ ಹರಿಹಾಯ್ದರು.

ಇದೇ ಸಮಯದಲ್ಲಿ ಕಾಂಗ್ರೆಸ್‍ನಲ್ಲಿ ಆಂತರಿಕ ಕಿತ್ತಾಟ ಇತ್ತು ಎನ್ನುವುದನ್ನು ಒಪ್ಪಿಕೊಂಡ ಜಾರಕಿಹೊಳಿ ರಾಹುಲ್ ಗಾಂಧಿ ಹಾಗೂ ಸಿದ್ದರಾಮಯ್ಯ ಅವರು ಮಧ್ಯಸ್ತಿಕೆ ವಹಿಸಿಕೊಂಡು ಸಮಸ್ಯೆ ಬಗೆಹರಿಸಿದ್ದಾರೆ ಎಂದು ತಿಳಿಸಿದರು. ಅಲ್ಲಿಗೆ ಅದು ಮುಗಿದ ಅಧ್ಯಾಯ. ಆದರೂ ಪದೇ ಪದೇ ನನ್ನ ಮೇಲೆ ಅಪಪ್ರಚಾರ ಮಾಡುವಂತಹ ಕೃತ್ಯಗಳನ್ನು ಮಾಡಲಾಗುತ್ತಿದೆ. ಇದನ್ನು ನಾನು ಸಹಿಸುವುದಿಲ್ಲ ಎಂದು ರಮೇಶ್ ಜಾರಕಿಹೊಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

vishwanews24