ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿ ಗುಜರಾತ್‌ನಲ್ಲಿ ಬಂಧನ – Vishwanews24
ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿ ಗುಜರಾತ್‌ನಲ್ಲಿ ಬಂಧನ
ಮೈಸೂರು: ಪರಿಶಿಷ್ಟ ಸಮುದಾಯದ ಮಹಿಳೆಯನ್ನು ವಂಚಿಸಿ, ಜಾತಿ ನಿಂದನೆ ಮಾಡಿ, ಹಲ್ಲೆ ನಡೆಸಿ, ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಸ್ಯಾಂಟ್ರೋ ರವಿಯನ್ನುಪೊಲೀಸರು ಕೊನೆಗೂ ಬಂಧಿಸಿದ್ದಾರೆ.
ಸ್ಯಾಂಟ್ರೋ ರವಿ ವಿರುದ್ಧ 2ನೇ ಪತ್ನಿ ಹಲವು ಗಂಭೀರ ಆರೋಪಗಳನ್ನು ಮಾಡಿದ್ದರು. ಈ ಸಂಬಂಧ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅದಾದ ಬಳಿಕ ಸ್ಯಾಂಟ್ರೋ ರವಿ ತಲೆಮರೆಸಿಕೊಂಡಿದ್ದ. 11 ದಿನಗಳ ಬಳಿಕ ಕೊನೆಗೂ ಗುಜರಾತ್‌ನಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ವಿಶ್ವದ ಅತೀ ಉದ್ದದ ನದಿ ವಿಹಾರ ನೌಕೆ `ಎಂವಿ ಗಂಗಾ ವಿಲಾಸ್’ ಕ್ರೂಸ್‌ಗೆ ಪ್ರಧಾನಿ ಅದ್ಧೂರಿ ಚಾಲನೆ – Vishwanews24
