ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ನಿಧನ – vishwanews24
ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ನಿಧನ
ಬೆಂಗಳೂರು : 2016ರಲ್ಲಿ ಬಿಡುಗಡೆಯಾಗಿ ದೊಡ್ಡ ಮಟ್ಟದ ಖ್ಯಾತಿ ಗಳಿಸಿದ್ದ ತಿಥಿ ಸಿನಿಮಾದಲ್ಲಿ ಗಡ್ಡಪ್ಪ ಪಾತ್ರದ ಮೂಲಕ ಮನೆಮಾತಾಗಿದ್ದ ಹಿರಿಯ ನಟ ಚನ್ನೇಗೌಡ ತಮ್ಮ 89ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ.
ಅಂತಾರಾಷ್ಟ್ರೀಯ ಪ್ರಶಸ್ತಿ ವಿಜೇತ ಸಿನಿಮಾದಲ್ಲಿ ಗಡ್ಡಪ್ಪ ಪಾತ್ರದಲ್ಲಿ ಅವರ ನಟನೆಯನ್ನು ಇಂದಿಗೂ ಜನ ನೆನಪಿಸಿಕೊಳ್ಳುತ್ತಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮಂಡ್ಯ ಜಿಲ್ಲೆಯ ತಮ್ಮ ಸ್ವಗ್ರಾಮ ನೊದೆಕೊಪ್ಪಲಿನಲ್ಲಿ ನಿಧನರಾಗಿದ್ದಾರೆ.
