ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚಿಸಿ : ರಾಜ್ಯ ಸರ್ಕಾರಕ್ಕೆ ಬಿ.ಕೆ. ಹರಿಪ್ರಸಾದ್ -Vishwanews24
ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚಿಸಿ : ರಾಜ್ಯ ಸರ್ಕಾರಕ್ಕೆ ಬಿ.ಕೆ. ಹರಿಪ್ರಸಾದ್ -Vishwanews24
ಮಂಗಳೂರು : ರಾಜ್ಯ ಸರ್ಕಾರ ಮರಾಠಿ ಅಭಿವೃದ್ಧಿ ಪ್ರಾಧಿಕಾರ ರಚನೆಯ ಬೆನ್ನಲ್ಲೇ ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚನೆ ಮಾಡಬೇಕು ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆಗ್ರಹಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನ್ನಡ ಅಭಿವೃದ್ಧಿಗೆ ನಿಜವಾದ ಕೊಡುಗೆ ನೀಡಿದವರು ತುಳುವರು. ಅವರನ್ನು ಸರ್ಕಾರ ಕಡೆಗಣಿಸಿದೆ. ಹೀಗಾಗಿ ಕೊಡವ ಇತ್ಯಾದಿ ಕರ್ನಾಟಕ ಅಂತರ್ಗತವಾದ ಸ್ಥಳೀಯ ಭಾಷೆಗಳ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.