ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ -vishwanews24

Featured, ಉಡುಪಿ

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್

ಉಡುಪಿ: ತುಳು ಭಾಷೆಗೆ ಅಧಿಕೃತ ಭಾಷೆಯ ಸ್ಥಾನಮಾನ ನೀಡುವ ನಿಟ್ಟಿನಲ್ಲಿ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ಸ್ವಾಗತಿಸುವುದಾಗಿ ಮಾಜಿ ಸಚಿವ, ಬಿಜೆಪಿ ಮುಖಂಡ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ. ಆದರೆ, ಈ ಮಾನ್ಯತೆಯನ್ನು ಕೇವಲ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ ಎಂದು ಅವರು ಆಕ್ಷೇಪಿಸಿದ್ದಾರೆ.

ಕನ್ನಡ, ತಮಿಳು, ತೆಲುಗು ಹಾಗೂ ಮಲಯಾಳಂನಂತೆ ತುಳು ಕೂಡ ತನ್ನದೇ ಆದ ಇತಿಹಾಸ, ಸಾಹಿತ್ಯ, ಸಂಸ್ಕೃತಿ ಹಾಗೂ ಭಾಷಾ ಪರಂಪರೆ ಹೊಂದಿದೆ. ಹೀಗಾಗಿ ರಾಜ್ಯದಾದ್ಯಂತ ಇರುವ ತುಳು ಭಾಷಿಕರ ಹಕ್ಕುಗಳನ್ನು ಪರಿಗಣಿಸಿ, ಭಾಷೆಗೆ ಯೋಗ್ಯವಾದ ಸ್ಥಾನಮಾನ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ತುಳು ಭಾಷೆಯನ್ನು ಭಾರತದ ಸಂವಿಧಾನದ ಎಂಟನೇ ಅನುಸೂಚಿಗೆ ಸೇರಿಸುವುದು ಪ್ರಮುಖ ಬೇಡಿಕೆಯಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಕ್ರಮ ಕೈಗೊಂಡು ತುಳು ಭಾಷೆಗೆ ಸೂಕ್ತ ಮಾನ್ಯತೆ ಕಲ್ಪಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

Leave a Reply