ದಕ್ಷಿಣ ಕನ್ನಡ ಜಿಲ್ಲೆಗೆ ಖಡಕ್ ಎಸ್ಪಿ ಅಣ್ಣಾಮಲೈ ಬರಲಿದ್ದಾರೆಯೇ…??

Featured, ಉಡುಪಿ

ಮಂಗಳೂರು : ಖಡಕ್ ಪೊಲೀಸ್ ಅಧಿಕಾರಿ ಅಣ್ಣಾಮಲೈ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆಗಿ ವರ್ಗಾವಣೆ ಆಗಲಿರುವ ಬಗ್ಗೆ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಈಗಾಗಲೇ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆಗಿರುವ ಅವರು ಜಿಲ್ಲೆಯಲ್ಲಿನ ಅನೇಕ ಅಕ್ರಮ ಚಟುವಟಿಕೆಗಳಿಗೆ ಬ್ರೆಕ್ ಹಾಕಿದ್ದರು ಹಾಗೂ ಸಮಾಜಮುಖಿ ಕೆಲಸ ಕಾರ್ಯಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದಾರೆ. ಮಾತ್ರವಲ್ಲದೇ ಖಡಕ್ ಪೊಲೀಸ್ ಅಧಿಕಾರಿಯಾಗಿ ಜನಸಾಮಾನ್ಯರ ಮನಗೆದ್ದಿದ್ದರು. ಈ ಹಿಂದೆ ಕರಾವಳಿಯಲ್ಲಿ ನಡೆದ ಗಲಭೆಗಳ ಸಮಯದಲ್ಲಿ ಅಣ್ಣಾಮಲೈ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ಮಾಡಬೇಕೆಂದು ಆಗ್ರಹಗಳು ಕೂಡ ಕೇಳಿಬಂದವು.