ದತ್ತಪೀಠದ ಬಗ್ಗೆ ವಿವಾದಾತ್ಮಕ ಹೇಳಿಕೆ: ಕ್ಷಮೆ ಕೇಳಿದ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ – Vishwanews24

Featured, ರಾಜ್ಯ ನ್ಯೂಸ್

ದತ್ತಪೀಠದ ಬಗ್ಗೆ ವಿವಾದಾತ್ಮಕ ಹೇಳಿಕೆ: ವಿಡಿಯೋ ಮಾಡಿ ಕ್ಷಮೆ ಕೇಳಿದ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ

ಚಿಕ್ಕಮಗಳೂರು: ದತ್ತಪೀಠ ದತ್ತಮಾಲೆಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಶೃಂಗೇರಿ ಕ್ಷೇತ್ರದ ಕಾಂಗ್ರೆಸ್ ಟಿ.ಡಿ.ರಾಜೇಗೌಡ ವಿರುದ್ಧ ಆಕ್ರೋಶ ಕೇಳಿಬಂದ ಹಿನ್ನೆಲೆ ಸ್ವತಃ ಶಾಸಕರು ಈ ಬಗ್ಗೆ ಕ್ಷಮ ಕೇಳಿದ್ದಾರೆ.

ಶಿರಡಿ ಸಾಯಿಬಾಬಾ ದರ್ಶನಕ್ಕೆ ತೆರಳಿದ್ದು, ಅಲ್ಲಿಂದಲೇ ವಿಡಿಯೋ ಮೂಲಕ ಟಿ.ಡಿ ರಾಜೇಗೌಡ ಕ್ಷಮೆ ಕೇಳಿದ್ದು,ಹಳ್ಳಿಗಳಲ್ಲಿ ರೂಡಿಯಿರುವ ಶಬ್ದವನ್ನು ಬೆಳೆಸಿದ್ದೇನೆ.

ಆ ಶಬ್ದ ಬಳಕೆ‌ ಯಾರ ಸಂಸ್ಕೃತಿಯು ಆಗಬಾರದು. ಆ ಶಬ್ದ ಬಳಸಬಾರದಿತ್ತು ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಕ್ಷಮೆಯಾಚಿಸಿದ್ದಾರೆ.

ಉಡುಪಿ: ಮಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಲೆಕ್ಕಾಧಿಕಾರಿಯ ಕಾರು ಚಾಲಕ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ – Vishwanews24

ಶಾಸಕರು ಹೇಳಿದ್ದೇನು?: ‘ಅವರು ಮನೆ ಹಾಳರು.. ರೆಕಾರ್ಡ್ ಮಾಡಿಕೊಳ್ಳ ಬೇಡಿ.. ಜನರಿಗೆ ದತ್ತಮಾಲೆ ಹಾಕಿಸಿ, ಕುಂಕುಮವನ್ನು ಹಾಕಿ ಕರೆದುಕೊಂಡು ಹೋಗುತ್ತಾರೆ. ಅಯೋಧ್ಯೆ ಹೋರಾಟದಲ್ಲಿ ಲಕ್ಷಾಂತರ ಜನರನ್ನು ಬಲಿ ಕೊಟ್ಟರು, ಬಾಬ್ರಿ ಮಸೀದಿ ಕೆಡವಲು ಹೋಗಿ ಲಕ್ಷಾಂತರ ಜನರು ಬಲಿಯಾದರು, ನಾನು ಬೈಯುತ್ತೇನೆ, ಜನರನ್ನು ಕರೆದುಕೊಂಡು ಹೋಗುವವರು ಮನೆಹಾಳರು..” ಎಂದು ಅವಾಚ್ಯ ಶಬ್ಬಗಳಿಂದ ಮಾತನಾಡಿದ್ದರು.

ಈ ಹೇಳಿಕೆ ವಿರುದ್ಧ ಆಕ್ರೋಶ, ಪ್ರತಿಭಟನೆ ಕೇಳಿ ಬಂದಿತ್ತು. ಈ ಕಾರಣದಿಂದ ಶಾಸಕರು ಕ್ಷಮೆ ಕೇಳದ್ದಾರೆ.

ಕಲ್ಯಾಣ ಕರ್ನಾಟಕದ 430 ಸೇರಿ 3,673 ಪೌರ ಕಾರ್ಮಿಕರ ನೇಮಕಾತಿಗೆ ಅರ್ಜಿ ಆಹ್ವಾನ : ಅರ್ಜಿ ಸಲ್ಲಿಕೆಗೆ ಜ.30 ಕೊನೆಯ ದಿನ – Vishwanews24

Leave a Reply