ದಾವಣಗೆರೆ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿಗೆ ಜೀವಾವಧಿ ಶಿಕ್ಷೆ -Vishwanews24

Featured, ಜಿಲ್ಲೆ, ರಾಜ್ಯ ನ್ಯೂಸ್

ದಾವಣಗೆರೆ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಯುವಕನಿಗೆ ದಾವಣಗೆರೆ 2 ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ಹಾಗೂ ಪೋಕ್ಸೋ ವಿಶೇಷ ಕೋರ್ಟ್ ಜೀವಾವಧಿ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ.

ಹಳ್ಳಿಮಲ್ಲಾಪುರದ ಮಹಾಂತೇಶ ನಾಯ್ಕ್ ಶಿಕ್ಷೆಗೆ ಒಳಗಾದ ಯುವಕ. ಶಾಲೆ ಆವರಣದಲ್ಲಿ ಆಟವಾಡುತ್ತಿದ್ದ ಬಾಲಕಿಯನ್ನು ಶಾಲೆಯ ಹಿಂಭಾಗಕ್ಕೆ ಕರೆದುಕೊಂಡು ಹೋದ ಆರೋಪಿ ಲೈಂಗಿಕ ದೌರ್ಜನ್ಯ ಎಸಗಿದ್ದ.

ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಎಸ್. ನಾಗಶ್ರೀ ಜೀವಾವಧಿ ಕಠಿಣ ಕಾರಾಗೃಹ ಶಿಕ್ಷೆ ಮತ್ತು 65,000 ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಶೌಕತ್ ಅಲಿ ವಾದ ಮಂಡಿಸಿದ್ದರು.