ದೀಪಾವಳಿ ಹಬ್ಬಕ್ಕೆ ಈ ವರ್ಷವೂ ದೆಹಲಿಯಲ್ಲಿ ಪಟಾಕಿ ನಿಷೇಧ : ಅರವಿಂದ್ ಕೇಜ್ರಿವಾಲ್ -Vishwanews24
ದೀಪಾವಳಿ ಹಬ್ಬಕ್ಕೆ ಈ ವರ್ಷವೂ ದೆಹಲಿಯಲ್ಲಿ ಪಟಾಕಿ ನಿಷೇಧ : ಅರವಿಂದ್ ಕೇಜ್ರಿವಾಲ್ -Vishwanews24
ನವದೆಹಲಿ : “ವಾಯು ಮಾಲಿನ್ಯವನ್ನು ಗಮನದಲ್ಲಿರಿಸಿಕೊಂಡು ದೀಪಾವಳಿ ಸಂದರ್ಭದಲ್ಲಿ ಈ ವರ್ಷವೂ ಪಟಾಕಿ ಹಚ್ಚುವುದಕ್ಕೆ ನಿರ್ಬಂಧ ಹೇರಲಾಗಿದೆ” ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಣೆ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ದೆಹಲಿಯ ವಾಯು ಮಾಲಿನ್ಯವನ್ನು ಗಮನದಲ್ಲಿಟ್ಟುಕೊಂಡು ಈ ವರ್ಷವೂ ಪಟಾಕಿ ಹಚ್ಚುವುದಕ್ಕೆ ನಿಷೇಧ ಹೇರಲಾಗಿದೆ. ಕಳೆದ ವರ್ಷದಂತೆ ಈ ವರ್ಷವೂ ಪಟಾಕಿಗಳ ಶೇಖರಣೆ, ಮಾರಾಟ ಹಾಗೂ ಪಟಾಕಿ ಸಿಡಿಸುವುದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗುವುದು” ಎಂದಿದ್ದಾರೆ.
“ದೆಹಲಿಯಲ್ಲಿ ವಾಯು ಮಾಲಿನ್ಯದ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು ಈ ತೀರ್ಮಾನ ಕೈಗೊಳ್ಳಲಾಗಿದೆ. ಈ ಹಿನ್ನೆಲೆ ಕಳೆದ 3 ವರ್ಷಗಳಿಂದ ದೀಪಾವಳಿ ಸಮಯದಲ್ಲಿ ಪಟಾಕಿ ಹಚ್ಚುವುದನ್ನು ನಿರ್ಬಂಧಿಸಲಾಗಿತ್ತು” ಎಂದು ತಿಳಿಸಿದ್ದಾರೆ.
“ಕಳೆದ ವರ್ಷದಂತೆ ಈ ಬಾರಿಯೂ ದೀಪಾವಳಿ ಸಂದರ್ಭ ಪಟಾಕಿ ಹಚ್ಚುವುದನ್ನು ನಿಷೇಧಿಸಲಾಗಿದೆ. ಇದರಿಂದ ಜನರ ಜೀವನವನ್ನು ಕಾಪಾಡಬಹುದು” ಎಂದಿದ್ದಾರೆ.
“ಕಳೆದ ವರ್ಷ ವ್ಯಾಪಾರಿಗಳನ್ನು ಸಂಗ್ರಹಿಸಿದ ಬಳಿಕ ಮಾಲಿನ್ಯದ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು ಸಂಪೂರ್ಣ ನಿಷೇಧ ಹೇರಲಾಗಿತ್ತು. ಇದರಿಂದ ವ್ಯಾಪಾರಿಗಳಿಗೆ ನಷ್ಟವಾಗಿತ್ತು. ಆದರೆ, ಈ ಬಾರಿ ಸಂಪೂರ್ಣ ನಿಷೇಧದ ದೃಷ್ಟಿಯಿಂದ ಯಾರೂ ಕೂಡಾ ಶೇಖರಣೆ ಮಾಡುವಂತಿಲ್ಲ” ಎಂದು ಹೇಳಿದ್ದಾರೆ.
पिछले 3 साल से दीवाली के समय दिल्ली के प्रदूषण की खतरनाक स्तिथि को देखते हुए पिछले साल की तरह इस बार भी हर प्रकार के पटाखों के भंडारण, बिक्री एवं उपयोग पर पूर्ण प्रतिबंध लगाया जा रहा है। जिससे लोगों की जिंदगी बचाई जा सके।
— Arvind Kejriwal (@ArvindKejriwal) September 15, 2021
