ದೆಹಲಿ ಗಣರಾಜ್ಯೋತ್ಸವ ಪರೇಡ್’ನಲ್ಲಿ ಭಾಗವಹಿಸಲು ಪುತ್ತೂರಿನ ಡಾ. ವಜೀದಾ ಬಾನು ಆಯ್ಕೆ – Vishwanews24

Featured, ದಕ್ಷಿಣ ಕನ್ನಡ

ದೆಹಲಿ ಗಣರಾಜ್ಯೋತ್ಸವ ಪರೇಡ್’ನಲ್ಲಿ ಭಾಗವಹಿಸಲು ಪುತ್ತೂರಿನ ಡಾ. ವಜೀದಾ ಬಾನು ಆಯ್ಕೆ

ಪುತ್ತೂರು: 2023 ನೇ ಸಾಲಿನಲ್ಲಿ ದೆಹಲಿಯಲ್ಲಿ ನಡೆಯಲಿರುವ ಭಾರತ ಗಣರಾಜ್ಯೋತ್ಸವ ಫೆರೇಡ್’ನಲ್ಲಿ ಭಾಗವಹಿಸಲು ಪುತ್ತೂರಿನ ಡಾ. ವಜೀದಾಬಾನು ಆಯ್ಕೆಯಾಗಿದ್ದಾರೆ

ಎನ್ ಎಸ್ ಎಸ್ ವತಿಯಿಂದ ನಡೆದ ದಕ್ಷಿಣ ಪ್ರಾಂತೀಯ ಪ್ರೀ ಆರ್ ಡಿ ತರಬೇತಿ ಶಿಬಿರದಲ್ಲಿ ಕರ್ನಾಟಕದಿಂದ ಆಯ್ಕೆಗೊಂಡಿರುವ ಏಳು ಮಂದಿಯಲ್ಲಿ ಇವರು ಒಬ್ಬರಾಗಿದ್ದಾರೆ.

ಇವರು ಪುತ್ತೂರು ಅಂಬಿಕಾ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿಯಾಗಿದ್ದು ಪುತ್ತೂರಿನ ಮೊಟ್ಟೆತ್ತಡ್ಕ ಇಸ್ಮಾಯಿಲ್ ಮತ್ತು ಸುಫಿಯಾ ಬಾನು ದಂಪತಿ ಪುತ್ರಿಯಾಗಿದ್ದು, ಪ್ರಸ್ತುತ ಎ ಜೆ ದಂತ ವೈದ್ಯಕೀಯ ಕಾಲೇಜಿನಿಂದ ದಂತ ವೈದ್ಯಕೀಯ ಪದವಿ ಪಡೆದಿರುತ್ತಾರೆ.

ಚಲಿಸುತ್ತಿದ್ದ ವಿಮಾನದಲ್ಲಿ ಹೊಡೆದಾಡಿಕೊಂಡ ಪ್ರಯಾಣಿಕರು – VIDEO

ಇತ್ತೀಚೆಗೆ ನಡೆದ ಪದವಿ ಪ್ರದಾನ ಸಮಾರಂಭದಲ್ಲಿ ರಾಜೀವ್ ಗಾಂಧಿ ವಿಶ್ವವಿದ್ಯಾನಿಲಯದ ಈ ಸಾಲಿನಲ್ಲಿ ಆರು ವಿಷಯಗಳಲ್ಲಿ ರಾಂಕ್ ಪಡೆದಿದ್ದಾರೆ. ಪುತ್ತೂರು ಕಮ್ಯೂನಿಟಿ ಸೆಂಟರ್ನ ಕೌನ್ಸಿಲರ್ ಆಗಿರುವ ಇವರು ಹಲವಾರು ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ, ಪ್ರೇರಣೆ ನೀಡಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸುತ್ತಿದ್ದಾರೆ ಎಂದು ಪುತ್ತೂರು ಕಮ್ಯೂನಿಟಿ ಸೆಂಟರ್ನ ಪ್ರಧಾನ ಕಾರ್ಯದರ್ಶಿ ಹನೀಫ್ ಪುತ್ತೂರು ತಿಳಿಸಿದ್ದಾರೆ.

Leave a Reply