ದೇಶದಲ್ಲಿ ಅಶಾಂತಿಯನ್ನು ಹುಟ್ಟು ಹಾಕುವ AIMIM, SDPI, RSS, ಭಜರಂಗದಳ ಎಲ್ಲವನ್ನೂ ಬ್ಯಾನ್ ಮಾಡಿ : ಸಿದ್ಧರಾಮಯ್ಯ ಆಗ್ರಹ -Vishwanews24

Featured, ರಾಜ್ಯ ನ್ಯೂಸ್

ಸರ್ಕಾರ ಅಶಾಂತಿಯನ್ನುಂಟು ಮಾಡುವ ಯಾವುದೇ ಸಂಘಟನೆಯಾಗಿದ್ದರೂ ಬ್ಯಾನ್ ಮಾಡಲಿ..

ಗೃಹ ಸಚಿವ ಸ್ಥಾನಕ್ಕೆ ಆರಗ ಜ್ಞಾನೇಂದ್ರ ಅನರ್ಹ

ನಿಭಾಯಿಸಲು ಆಗದೇ ಇದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಲಿ..

ಹುಬ್ಬಳ್ಳಿ: ದೇಶದಲ್ಲಿ ಅಶಾಂತಿಯನ್ನು ಹುಟ್ಟು ಹಾಕುವ ಎಐಎಂಐಎಂ, ಎಸ್‌ಡಿಪಿಐ, ಆರೆಸ್ಸೆಸ್‌, ಭಜರಂಗದಳ ಎಲ್ಲವನ್ನೂ ಬ್ಯಾನ್ ಮಾಡಿ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಆಗ್ರಹಿಸಿದ್ದಾರೆ.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸರ್ಕಾರ ಅಶಾಂತಿಯನ್ನುಂಟು ಮಾಡುವ ಯಾವುದೇ ಸಂಘಟನೆಯಾಗಿದ್ದರೂ ಬ್ಯಾನ್ ಮಾಡಲಿ. ಅದರಲ್ಲಿ ಎಐಎಂಐಎಂ, ಎಸ್‌ಡಿಪಿಐ, ಆರೆಸ್ಸೆಸ್‌, ಭಜರಂಗದಳ ಎಲ್ಲವನ್ನೂ ಬ್ಯಾನ್ ಮಾಡಲಿ ಎಂದರು.

ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ಕುರಿತು ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ‘ಗೃಹ ಸಚಿವ ಸ್ಥಾನಕ್ಕೆ ಆರಗ ಜ್ಞಾನೇಂದ್ರ ಅನರ್ಹನಾಗಿದ್ದಾನೆ. ನಿಭಾಯಿಸಲು ಆಗದೇ ಇದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಲಿ. ರಾಜ್ಯದಲ್ಲಿ ಗೊಂದಲವನ್ನುಂಟು ಮಾಡುವ ಹೇಳಿಕೆ ನೀಡುವ ಮೂಲಕ ಗೃಹ ಸಚಿವ ಸ್ಥಾನದ ಮರ್ಯಾದೆ ತೆಗೆಯುತ್ತಿದ್ದಾರೆ. ಅಲ್ಲದೇ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಸುತ್ತಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಸಿದ್ಧರಾಮಯ್ಯ ಹರಿಹಾಯ್ದರು.

40% ಕಮೀಷನ್ ದಂಧೆಯ ಕುರಿತು ಮಾತನಾಡಿ, ಈಗಾಗಲೇ ಈ ಬಗ್ಗೆ ಸಾಕಷ್ಟು ಮಾತನಾಡಿದ್ದೇವೆ. ಈಗ ಜನರ ಕೈಯಲ್ಲಿಯೇ ಕೊಟ್ಟಿದ್ದೇವೆ. ಮುಂದಿನ ದಿನಗಳಲ್ಲಿ ಅವರೇ ತಕ್ಕ ಉತ್ತರವನ್ನು ನೀಡುವ ಮೂಲಕ ಜನರು ಇದಕ್ಕೆ ತಕ್ಕ ಪಾಠ ಕಲಿಸಬೇಕಿದೆ ಎಂದು ಅವರು ಹೇಳಿದರು.

ಉಡುಪಿ : ಹಿಜಾಬ್ ಧರಿಸಲು ಅವಕಾಶ ನೀಡಬೇಕೆಂದು ನಾಳೆಯೂ ಪಟ್ಟು ಹಿಡಿದರೆ ಅಂತಹ ವಿದ್ಯಾರ್ಥಿನಿಯರ ಮೇಲೆ ಕ್ರಿಮಿನಲ್ ಕೇಸ್ ಜೊತೆಗೆ ನ್ಯಾಯಾಂಗ ನಿಂದನೆ ಪ್ರಕರಣ ದಾಖಲು  : ರಘುಪತಿ ಭಟ್ ಎಚ್ಚರಿಕೆ – Vishwanews24

 

 

Leave a Reply