ದೇಶದಲ್ಲಿ ಕೊರೊನಾ ಅಬ್ಬರ : ಒಂದೇ ದಿನ 2 ಲಕ್ಷಕ್ಕೂ ಅಧಿಕ ಪ್ರಕರಣ -Vishwanews24
ಭಾರತದಲ್ಲಿ ಕೊರೊನಾ ಅಬ್ಬರ : ಒಂದೇ ದಿನ 2 ಲಕ್ಷಕ್ಕೂ ಅಧಿಕ ಪ್ರಕರಣ -Vishwanews24
ನವದೆಹಲಿ : ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಅಬ್ಬರ ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 2 ಲಕ್ಷಕ್ಕೂ ಹೆಚ್ಚು ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.
ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ದೇಶದಲ್ಲಿ ಒಂದೇ ದಿನ 200,739 ಕೋವಿಡ್-19 ಪ್ರಕರಣಗಳೊಂದಿಗೆ, ಒಂದು ದಿನದ ಗರಿಷ್ಠ ಏರಿಕೆಯೊಂದಿಗೆ, ಒಟ್ಟು ಸಂಖ್ಯೆ 14 ಮಿಲಿಯನ್ ಗಡಿಯನ್ನು ದಾಟಿದೆ. ಸಕ್ರಿಯ ಪ್ರಕರಣಗಳು ಸಹ 106,173 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಕೋವಿಡ್-19 ಸೋಂಕಿಗೆ ಒಟ್ಟು 1,038 ಜನರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 1,73,123 ಕ್ಕೆ ಏರಿದೆ.
India reports 2,00,739 new #COVID19 cases, 93,528 discharges and 1,038 deaths in the last 24 hours, as per Union Health Ministry
Total cases: 1,40,74,564
Total recoveries: 1,24,29,564
Active cases: 14,71,877
Death toll: 1,73,123Total vaccination: 11,44,93,238 pic.twitter.com/B5quloIUjH
— ANI (@ANI) April 15, 2021
ಮಹಾರಾಷ್ಟ್ರ, ಛತ್ತೀಸ್ ಗಢ, ಉತ್ತರ ಪ್ರದೇಶ, ಕರ್ನಾಟಕ, ದೆಹಲಿ, ತಮಿಳುನಾಡು, ಮಧ್ಯಪ್ರದೇಶ, ಗುಜರಾತ್, ಹರಿಯಾಣ, ರಾಜಸ್ಥಾನ, ಪಂಜಾಬ್, ಕೇರಳ, ತೆಲಂಗಾಣ, ಉತ್ತರಾಖಂಡ್, ಆಂಧ್ರಪ್ರದೇಶ ಮತ್ತು ಪಶ್ಚಿಮ ಬಂಗಾಳ ಒಂದೇ ದಿನದಲ್ಲಿ ಹೊಸ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಹೆಚ್ಚಳವಾಗಿದ್ದು, ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.
