ದೇಶದ ಮುಂದಿನ ಪ್ರಧಾನಿಯಾಗಲಿರುವ ರಾಹುಲ್ ಗಾಂಧಿ ಅವರು ಕರ್ನಾಟಕದಿಂದಲೇ ಸ್ಪರ್ಧಿಸಬೇಕು :ಸಿದ್ದರಾಮಯ್ಯ – Vishwanews24
ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕರ್ನಾಟಕದಿಂದ ಸ್ಪರ್ಧಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.
ದೇಶದ ಮುಂದಿನ ಪ್ರಧಾನಿಯಾಗಲಿರುವ ರಾಹುಲ್ ಗಾಂಧಿ ಅವರು ಕರ್ನಾಟಕದಿಂದಲೇ ಸ್ಪರ್ಧಿಸಬೇಕು ಮತ್ತು ರಾಜಕೀಯ ಬೆಳವಣಿಗೆಗೆ ಮಾದರಿಯಾಗಬೇಕೆಂದು ಬಯಸುವುದಾಗಿ ತಿಳಿಸಿದ್ದಾರೆ.
ಉತ್ತರ ಪ್ರದೇಶದ ಅಮೇಥಿಯಿಂದ ಸ್ಪರ್ಧಿಸುವ ರಾಹುಲ್ ಗಾಂಧಿಗೆ ಈ ಬಾರಿ ಕರ್ನಾಟಕದಿಂದಲೂ ಸ್ಪರ್ಧಿಸುವಂತೆ ರಾಜ್ಯ ಕಾಂಗ್ರೆಸ್ ನಾಯಕರು ಒತ್ತಾಯಿಸುತ್ತಿದ್ದು, ಈ ಸಂಬಂಧ ರಾಜ್ಯ ಕಾಂಗ್ರೆಸ್ ನಾಯಕರು #RaGaFromKarnataka ಎಂಬ ಹ್ಯಾಷ್ ಟ್ಯಾಗ್ ಬಳಸಿ ಟ್ವಿಟ್ಟರ್ ಅಭಿಯಾನ ಆರಂಭಿಸಿದ್ದಾರೆ.
Karnataka has always supported & encouraged @INCIndia leaders. It has been proved in case of Smt. Indira ji & Smt. Sonia ji.
We also want our next Prime Minister of India Shri. @RahulGandhi to contest from Karnataka & herald new developmental paradigm.#RaGaFromKarnataka
— Siddaramaiah (@siddaramaiah) March 15, 2019
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅಮೇಥಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಾರೋ ಇಲ್ಲವೋ ಎಂಬ ಊಹಾಪೋಹದ ಬೆನ್ನಲ್ಲೇ ಸಿದ್ದರಾಮಯ್ಯ ಮಾಡಿದ ಟ್ವೀಟ್ ಚರ್ಚೆಗೆ ಗ್ರಾಸವಾಗಿದೆ.
