ದೇಶದ 15ನೇ ರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದ ದ್ರೌಪದಿ ಮುರ್ಮು – Vishwanews24
ದೇಶದ 15ನೇ ರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದ ದ್ರೌಪದಿ ಮುರ್ಮು
ದೇಶದ ನೂತನ ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ದ್ರೌಪದಿ ಮುರ್ಮು ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಂಸತ್ತಿನ ಸೆಂಟ್ರಲ್ ಹಾಲ್ನಲ್ಲಿ ಬೆಳಗ್ಗೆ 10.15ಕ್ಕೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆದಿದ್ದು, ರಾಷ್ಟ್ರದ 15ನೇ ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಮುಖ್ಯ ನ್ಯಾಯಮೂರ್ತಿ ಎನ್ವಿ ರಮಣ ಅವರು ಪ್ರಮಾಣ ವಚನ ಬೋಧಿಸಿದ್ದು, ಈ ಸಂದರ್ಭದಲ್ಲಿ 21 ಬಂದೂಕುಗಳ ಗೌರವ ವಂದನೆ ನಡೆಸಲಾಗಿದೆ.
ದ್ರೌಪದಿ ಮುರ್ಮು ದೇಶದ ಮೊದಲ ಮಹಿಳಾ ಬುಡಕಟ್ಟು ಅಧ್ಯಕ್ಷರಾಗಿದ್ದು, ಎನ್ಡಿಎ ಪರವಾಗಿ ರಾಷ್ಟ್ರಪತಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಇದೀಗ ಬಹುಮತಗಳನ್ನು ಪಡೆದು ದೇಶದ ನೂತನ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಡಬಲ್ ಡೆಕ್ಕರ್ ಖಾಸಗಿ ಬಸ್ ಗಳ ನಡುವೆ ಅಪಘಾತ : 8 ಮಂದಿ ಸಾವು, ಹಲವರು ಗಂಭೀರ – Vishwanews24
