‘ದ.ಕ ಉಡುಪಿ  ಸೇರಿದಂತೆ 13 ಜಿಲ್ಲೆಗಳಲ್ಲಿ ಲಾಕ್‌ಡೌನ್ ಮುಂದುವರಿಕೆ’ : ಬಿ. ಎಸ್ ಯಡಿಯೂರಪ್ಪ -Vishwanews24

Featured, ರಾಜ್ಯ ನ್ಯೂಸ್

‘ದ.ಕ ಉಡುಪಿ  ಸೇರಿದಂತೆ 13 ಜಿಲ್ಲೆಗಳಲ್ಲಿ ಲಾಕ್‌ಡೌನ್ ಮುಂದುವರಿಕೆ’ : ಬಿ. ಎಸ್ ಯಡಿಯೂರಪ್ಪ -Vishwanews24

ಬೆಂಗಳೂರು : “ಕರ್ನಾಟಕದಲ್ಲಿ ಶೇ.5ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವಂತ 16 ಜಿಲ್ಲೆಗಳಲ್ಲಿ ಅನ್‌ಲಾಕ್ ಮಾಡಲಾಗುತ್ತಿದ್ದು, ಇನ್ನುಳಿದಂತೆ ಪಾಸಿಟಿವಿಟಿ ದರಗಳು ಹೆಚ್ಚಿರುವಂತ 13 ಜಿಲ್ಲೆಗಳಲ್ಲಿ ಲಾಕ್‌ಡೌನ್ ಮುಂದುವರೆಸಲಾಗುತ್ತಿದ್ದು, ಜುಲೈ 5ರ ವರೆಗೆ ಈ ಹೊಸ ಮಾರ್ಗಸೂಚಿ ಮುಂದುವರಿಯಲಿದೆ” ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಿಸಿದ್ದಾರೆ.

ಈ ಕುರಿತು ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ಕೊರೊನಾ ಉಸ್ತುವಾರಿ ಸಚಿವರು, ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಅವರು, ಶೇ.5ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇರುವಂತ 13 ಜಿಲ್ಲೆಗಳಾದಂತ ಹಾಸನ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಧಾರವಾಡ, ಕೊಡಗು ಬಳ್ಳಾರಿ, ಚಿತ್ರದುರ್ಗ, ವಿಜಯಪುರ ಜಿಲ್ಲೆಗಳಲ್ಲಿ ಈ ಹಿಂದಿನ ಆದೇಶವೇ ಮುಂದುವರೆಯಲಿದೆ” ಎಂದರು.