ದ.ಕ. ಜಿಲ್ಲೆಯಲ್ಲಿ ಇಂದು 225 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ -Vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಮಂಗಳವಾರದಂದು ಮತ್ತೆ 225 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6618ಕ್ಕೆ ಏರಿಕೆಯಾಗಿದೆ.

 

ಜಿಲ್ಲೆಯಲ್ಲಿ ಮಂಗಳವಾರದಂದು  73 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಈ ನಡುವೆ ಮತ್ತೆ ನಾಲ್ವರು ಕೊರೊನಾದಿಂದಾಗಿ ಜಿಲ್ಲೆಯಲ್ಲಿ ಸಾವನ್ನಪ್ಪಿದ್ದಾರೆ.

3138 ಮಂದಿ ಸದ್ಯ ಜಿಲ್ಲೆಯ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 2927 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಜಿಲ್ಲೆಯಲ್ಲಿ ಇಲ್ಲಿಯ ತನಕ ಒಟ್ಟು 180 ಮಂದಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.