ಧರ್ಮಸ್ಥಳ ಕೇಸ್ : ಇಂದು ಚಿನ್ನಯ್ಯನನ್ನು ಬೆಳ್ತಂಗಡಿ ಕೋರ್ಟ್‍ಗೆ ಹಾಜರುಪಡಿಸಲಿರುವ ಎಸ್ಐಟಿ – vishwanews24
ಧರ್ಮಸ್ಥಳ ಕೇಸ್ : ಇಂದು ಚಿನ್ನಯ್ಯನನ್ನು ಬೆಳ್ತಂಗಡಿ ಕೋರ್ಟ್‍ಗೆ ಹಾಜರುಪಡಿಸಲಿರುವ ಎಸ್‍ಐಟಿ
ಬೆಳ್ತಂಗಡಿ : ಧರ್ಮಸ್ಥಳ ಬುರುಡೆ ಪ್ರಕರಣದ ಆರೋಪಿ ಚಿನ್ನಯ್ಯನನ್ನು ಇಂದು (ಸೆ.18) ಬೆಳ್ತಂಗಡಿ ಕೋರ್ಟ್‍ಗೆ ಪೊಲೀಸರು ಹಾಜರುಪಡಿಸಲಿದ್ದಾರೆ.
ನ್ಯಾಯಾಧೀಶರ ಮುಂದೆ ಚಿನ್ನಯ್ಯ ಮತ್ತಷ್ಟು ಹೇಳಿಕೆ ನೀಡಲಿದ್ದಾನೆ. ಈ ಹಿಂದೆ ನೀಡಿದ್ದ ಹೇಳಿಕೆಗೆ ಹೆಚ್ಚುವರಿ ಹೇಳಿಕೆ ಸೇರ್ಪಡೆ ಪ್ರಕ್ರಿಯೆ ನಡೆಯಲಿದೆ. ಸದ್ಯ ಶಿವಮೊಗ್ಗ ಜೈಲಿನಲ್ಲಿರುವ ಚಿನ್ನಯ್ಯನನ್ನು ಸೆ.6ರಂದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.
ಶಿವಮೊಗ್ಗ ಜೈಲಿನಿಂದ ಚಿನ್ನಯ್ಯನನ್ನು ಎಸ್‍ಐಟಿ ಅಧಿಕಾರಿಗಳು ಬೆಳಗ್ಗೆ 11:30ಕ್ಕೆ ಬೆಳ್ತಂಗಡಿ ಕೋರ್ಟ್‍ಗೆ ಹಾಜರುಪಡಿಸುವ ಸಾಧ್ಯತೆ ಇದೆ. ಧರ್ಮಸ್ಥಳದ ಬುರುಡೆ ಕೇಸ್‌ನಲ್ಲಿ ಸೌಜನ್ಯ ಮಾವ ವಿಠಲಗೌಡ ಬಂಗ್ಲೆಗುಡ್ಡದಲ್ಲಿ ರಾಶಿರಾಶಿ ಕಳೇಬರ ಸಿಗುತ್ತವೆ ಎಂಬ ವೀಡಿಯೋ ಹೇಳಿಕೆ ಬೆನ್ನಲ್ಲೇ ಎಸ್‌ಐಟಿ ತನಿಖೆಗೆ ಟ್ವಿಸ್ಟ್ ಸಿಕ್ಕಿದೆ.
ಸೆ. 22 ರಿಂದ ಅ.2 ರ ವರೆಗೆ ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಉಚ್ಚಿಲದಲ್ಲಿ ಅದ್ದೂರಿ ದಸರಾ ಸಂಭ್ರಮ – vishwanews24
ನೇತ್ರಾವತಿ ನದಿ ದಡದ ಬಂಗ್ಲೆಗುಡ್ಡಕ್ಕೆ ಎಸ್‌ಐಟಿ ತನಿಖಾಧಿಕಾರಿ ಜಿತೇಂದ್ರ ದಯಾಮ ನೇತೃತ್ವದಲ್ಲಿ ಸುಮಾರು 7 ಗಂಟೆಗಳ ಕಾಲ ಮಹಜರು ನಡೆಯಿತು. ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, ಸೋಕೋ ಟೀಮ್, ಕಂದಾಯ ಇಲಾಖೆ, ಪಂಚಾಯತ್ ಸಿಬ್ಬಂದಿ ಮಹಜರಿನಲ್ಲಿ ಭಾಗಿಯಾಗಿದ್ದರು. ಬಂಗ್ಲೆಗುಡ್ಡದಲ್ಲಿ 5 ಕಡೆ ಮಹಜರು ನಡೆದಿದೆ. ಈ ವೇಳೆ 5 ತಲೆಬುರಡೆ, 113 ಮೂಳೆಗಳು ಸಿಕ್ಕಿವೆ ಎಂದು ವರದಿಯಾಗಿದೆ
