ಧರ್ಮಸ್ಥಳ ಪ್ರಕರಣದಲ್ಲಿ ಜನರಿಗೆ ವಾಸ್ತವಾಂಶ ತಿಳಿಸುವುದಷ್ಟೇ ನಮ್ಮ ಸರಕಾರದ ಉದ್ದೇಶ :  ಡಿ.ಕೆ.ಶಿ – vishwanews24

Featured, ರಾಜ್ಯ ನ್ಯೂಸ್

ಧರ್ಮಸ್ಥಳ ಪ್ರಕರಣದಲ್ಲಿ ಜನರಿಗೆ ವಾಸ್ತವಾಂಶ ತಿಳಿಸುವುದಷ್ಟೇ ನಮ್ಮ ಸರಕಾರದ ಉದ್ದೇಶ :  ಡಿ.ಕೆ.ಶಿ

ಬೆಂಗಳೂರು :ಧರ್ಮಸ್ಥಳ ಪ್ರಕರಣದಲ್ಲಿ ಜನರಿಗೆ ವಾಸ್ತವಾಂಶ ತಿಳಿಸುವುದಷ್ಟೇ ನಮ್ಮ ಸರಕಾರದ ಉದ್ದೇಶ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿ, ಎಸ್ಐಟಿ ರಚನೆಯಿಂದ ನನ್ನ ಮೇಲಿದ್ದ ಕಳಂಕ ಕಳೆಯುತ್ತಿದೆ ಎಂಬ ವೀರೇಂದ್ರ ಹೆಗಡೆಯವರ ಹೇಳಿಕೆ ಬಗ್ಗೆ ಕೇಳಿದಾಗ, “ಈ ಪ್ರಕರಣದ ತನಿಖಾ ವರದಿ ಬರಲಿ. ಆನಂತರ ನಾನು ಮಾತನಾಡುತ್ತೇನೆ. ವೀರೇಂದ್ರ ಹೆಗಡೆ ಅವರ ಹೇಳಿಕೆಯನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ. ತನಿಖಾ ವರದಿ ಬರುವ ಮುನ್ನವೇ ಈ ಬಗ್ಗೆ ಪ್ರತಿಕ್ರಿಯಿಸುವುದರಲ್ಲಿ ಅರ್ಥವಿಲ್ಲ ಎಂದರು.

ಉಡುಪಿ: ಎ.ಕೆ.ಎಮ್.ಎಸ್. ಬಸ್ ಮಾಲೀಕ ಭೀಕರ ಹತ್ಯೆ vishwanews24

ರಾಜಕೀಯವಾಗಿ ಯಾರು ಏನು ಬೇಕಾದರೂ ಮಾತನಾಡಬಹುದು. ಆದರೆ ನಾನು ಸರಕಾರದ ಪ್ರತಿನಿಧಿಯಾಗಿರುವುದರಿಂದ ಬೇರೆಯವರಂತೆ ಮಾತನಾಡಲು ಬರುವುದಿಲ್ಲ. ಈ ವಿಚಾರವಾಗಿ ವರದಿ ಬಂದ ನಂತರ ಮುಖ್ಯಮಂತ್ರಿಗಳು ಅಥವಾ ಗೃಹ ಸಚಿವರು ಅಧಿಕೃತ ಹೇಳಿಕೆ ನೀಡಬೇಕು ಎಂದು ತಿಳಿಸಿದರು.

Leave a Reply