ಧರ್ಮಸ್ಥಳ ಪ್ರಕರಣದ ಎಲ್ಲಾ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ, ಕ್ಯಾಬಿನೆಟ್‌ನಲ್ಲಿ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ : ಅಮಿತ್ ಶಾ ಪ್ರತಿಕ್ರಿಯೆ – vishwanews24
ಧರ್ಮಸ್ಥಳ ಪ್ರಕರಣ ಸಂಬಂಧ ಕೇಂದ್ರ ಗೃಹ ಸಚಿವರ ಭೇಟಿಯಾದ ಕರ್ನಾಟಕದ ಮಠಾಧೀಶರು..
ಧರ್ಮಸ್ಥಳ ಪ್ರಕರಣದ ಎಲ್ಲಾ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ..
ಧರ್ಮ ಕ್ಷೇತ್ರಗಳ ವಿರುದ್ಧದ ಅಪಪ್ರಚಾರಕ್ಕೆ ಕಡಿವಾಣ ಹಾಕಲು ಹೊಸ ಕಾನೂನು ತರುತ್ತೇವೆ : ಅಮಿತ್ ಶಾ ಪ್ರತಿಕ್ರಿಯೆ
ನವದೆಹಲಿ: ಧರ್ಮಸ್ಥಳ ಪ್ರಕರಣ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಕರ್ನಾಟಕ ಸ್ವಾಮೀಜಿಗಳು ಭೇಟಿಯಾಗಿದ್ದಾರೆ. ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಬೇಕು ಎಂದು ಕೇಂದ್ರ ಸಚಿವರಲ್ಲಿ ಮನವಿ ಮಾಡಿದ್ದಾರೆ.
ಪಂಚಮಸಾಲಿ ಲಿಂಗಾಯತ ಮಠದ ವಚನಾನಂದ ಸ್ವಾಮೀಜಿ ನೇತೃತ್ವದ ಸನಾತನ ಸಂತ ನಿಯೋಗವು ದೆಹಲಿಗೆ ತೆರಳಿ ಖುದ್ದು ಅಮಿತ್ ಶಾ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ. ಮಂಗಳೂರಿನ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಸೇರಿ ವಿವಿಧ ಪೀಠಗಳ 8 ಸ್ವಾಮೀಜಿಗಳ ನಿಯೋಗದಲ್ಲಿದ್ದರು.
ಅತ್ಯಾಚಾರ ಪ್ರಕರಣ : ಕಿರುತೆರೆ ನಟ ಆಶಿಶ್ ಕಪೂರ್ ಬಂಧನ – vishwanews24
ಹಿಂದೂಗಳು, ಹಿಂದೂ ಧಾರ್ಮಿಕ ಕೇಂದ್ರಗಳ ಮೇಲೆ ಹಾಗೂ ಹಿಂದೂ ಮಠಾಧೀಶರ ಮೇಲೆ ಪದೇ ಪದೇ ದಾಳಿ ಆಗುತ್ತಿದೆ. ಆರಾರು ತಿಂಗಳ ಅಂತರದಲ್ಲಿ ದಾಳಿಗಳು ನಡೆಯುತ್ತಿವೆ. ಇದರ ಹಿಂದೆ ವ್ಯವಸ್ಥಿತ ಷಡ್ಯಂತ್ರ ಇದೆ. ಹೀಗಾಗಿ, ಸೂಕ್ತ ತನಿಖೆ ನಡೆಸಬೇಕು ಎಂದು ಸ್ವಾಮೀಜಿಗಳು ಆಗ್ರಹಿಸಿದರು.
ಧರ್ಮಸ್ಥಳ ಪ್ರಕರಣದ ಎಲ್ಲಾ ಬೆಳವಣಿಗೆಗಳನ್ನ ನಾನೇ ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಧರ್ಮಸ್ಥಳ ಪ್ರಕರಣ ಬಗ್ಗೆ ಕ್ಯಾಬಿನೆಟ್ ನೇತೃತ್ವದಲ್ಲಿ ಸಭೆ ನಡೆಸುತ್ತೇವೆ. ಸಭೆಯ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಅಮಿತ್ ಶಾ ತಿಳಿಸಿದ್ದಾರೆ.
ಧರ್ಮ ಕ್ಷೇತ್ರಗಳ ವಿರುದ್ಧದ ಅಪಪ್ರಚಾರಕ್ಕೆ ಕಡಿವಾಣ ಹಾಕಲು ಹೊಸ ಕಾನೂನು ತರುತ್ತೇವೆ. ನೀವು ಸಮಾಜವನ್ನ ಜಾಗೃತಿಗೊಳಿಸಿ ಎಂದು ಸ್ವಾಮೀಜಿಗಳಿಗೆ ಅಮಿತ್ ಶಾ ಸಲಹೆ ನೀಡಿದ್ದಾರೆ.
