ಧರ್ಮಸ್ಥಳ ಬುರುಡೆ ಪ್ರಕರಣ : ಹೆಸರು ಪ್ರಸ್ತಾಪ ಆದ ಕೂಡಲೇ ಎಲ್ಲರೂ ಕ್ರಿಮಿನಲ್ ಅಲ್ಲ: ಪ್ರಿಯಾಂಕ್ ಖರ್ಗೆ – vishwanews24
ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಪ್ರಕಾಶ್ ರಾಜ್ ಹೆಸರು ತಳುಕು ; ಹೆಸರು ಪ್ರಸ್ತಾಪ ಆದ ಕೂಡಲೇ ಕ್ರಿಮಿನಲ್ ಅಲ್ಲ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ನಟ ಪ್ರಕಾಶ್ ರಾಜ್ ಹೆಸರು ತಳುಕು ಹಾಕಿಕೊಂಡಿರುವ ಬಗ್ಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೆಸರು ಪ್ರಸ್ತಾಪ ಆದ ಕೂಡಲೇ ಎಲ್ಲರೂ ಕ್ರಿಮಿನಲ್ ಅಲ್ಲ. ಕೋರ್ಟ್ ಎಸ್ಐಟಿ ಚೀಫ್ಗೆ ಕೇಳಿದೆ, ಅವರು ಉತ್ತರ ಕೊಡಲಿ. ಮಾಧ್ಯಮಗಳಲ್ಲಿ ಚರ್ಚೆ ಮಾಡೋಕೆ ಆಗಲ್ಲ ಎಂದಿದ್ದಾರೆ.
ಇದನ್ನೂ ಓದಿ:
260 ಜನರ ಬಲಿ ಪಡೆದ ಅಹಮದಾಬಾದ್ ಏರ್ ಇಂಡಿಯಾ ದುರಂತಕ್ಕೆ 1 ವರ್ಷ – vishwanews24
ಇನ್ನೂ ಮೈಕ್ರೋ ಫೈನಾನ್ಸ್ ಕಾಯ್ದೆ ಧರ್ಮಸ್ಥಳ ಸಂಘ ಪಾಲನೆ ಮಾಡ್ತಿಲ್ಲ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿ, ಕಾಯ್ದೆ ಇಡೀ ರಾಜ್ಯಕ್ಕೆ ತಂದುರೋದು. ಹೊಸ ಕಾಯ್ದೆ ಬಂದ ಮೇಲೆ ಯಾರು ಉಲ್ಲಂಘನೆ ಮಾಡಿದ್ದಾರೆ ನನಗೆ ಗೊತ್ತಿಲ್ಲ. ಒಂದು ವಾರ, 10 ದಿನಗಳಲ್ಲಿ ಮೀಟಿಂಗ್ ಮಾಡಿ ತಿಳಿಸ್ತೀನಿ. ಧರ್ಮಸ್ಥಳ ಸಂಘಕ್ಕೆ ಮಾತ್ರವಲ್ಲ ಆ ಕಾಯ್ದೆ ಅಲ್ಲ. ಎಲ್ಲರಿಗೂ ಅನ್ವಯ ಆಗುತ್ತದೆ. ಪಾಲನೆ ಮಾಡಬೇಕು. ದೂರು ಏನಿದೆ ಗೊತ್ತಿಲ್ಲ. ತನಿಖೆ ಆಗಬೇಕು. ಅದರ ಬಗ್ಗೆ ಪರಿಶೀಲನೆ ಮಾಡೋಣ ಎಂದಿದ್ದಾರೆ.
