ಧರ್ಮಸ್ಥಳ ವಿರುದ್ಧ ವ್ಯವಸ್ಥಿತ ಷಡ್ಯಂತ್ರ : ಆಗಸ್ಟ್ ತಿಂಗಳಾಂತ್ಯಕ್ಕೆ ಜಿಲ್ಲೆಯಲ್ಲಿ ದೊಡ್ಡ ಮಟ್ಟದ ಪ್ರತಿಭಟನಾ ಸಭೆ – vishwanews24
ಧರ್ಮಸ್ಥಳ ವಿರುದ್ಧ ವ್ಯವಸ್ಥಿತ ಷಡ್ಯಂತ್ರ : ಆಗಸ್ಟ್ ತಿಂಗಳಾಂತ್ಯಕ್ಕೆ ಜಿಲ್ಲೆಯಲ್ಲಿ ದೊಡ್ಡ ಮಟ್ಟದ ಪ್ರತಿಭಟನಾ ಸಭೆ
ಉಡುಪಿ: ಧರ್ಮಸ್ಥಳ ವಿರುದ್ಧ ವ್ಯವಸ್ಥಿತ ಷಡ್ಯಂತ್ರ ನಡೆಯುತ್ತಿದೆ. ಹೀಗಾಗಿ ಸಾಮಾಜಿಕ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಆಗಸ್ಟ್ ತಿಂಗಳಾಂತ್ಯಕ್ಕೆ ಜಿಲ್ಲೆಯಲ್ಲಿ ದೊಡ್ಡ ಮಟ್ಟದ ಪ್ರತಿಭಟನಾ ಸಭೆ ಆಯೋಜಿಸಲಾಗುವುದು ಎಂದು ಮಾಜಿ ಶಾಸಕ ಕೆ. ರಘುಪತಿ ಭಟ್ ತಿಳಿಸಿದರು.
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ಐಟಿ ತನಿಖೆ ನಡೆದಿರುವುದು ಬಹಳ ಒಳ್ಳೆಯದಾಗಿದೆ. ಅನ್ವೇಷಣೆಯಿಂದ ಸಂಶಯಗಳಿಗೆ ತೆರೆಬಿದ್ದಿದೆ ಎಂದರು.
ಧರ್ಮಸ್ಥಳ ಧಾರ್ಮಿಕ ಸಂಸ್ಥೆಯಾಗಿ ಆದಾಯವನ್ನು ವ್ಯವಸ್ಥಿತವಾಗಿ ವಿನಿಯೋಗಿಸುತ್ತಿದೆ. ಅನೇಕ ಧಾರ್ಮಿಕ ಕೇಂದ್ರಗಳ ಜೀಣೋರ್ದ್ಧಾರಕ್ಕೆ 1 ಲಕ್ಷದಿಂದ 1 ಕೋಟಿ ರೂ. ವರೆಗೆ ಅನುದಾನ ಬಂದಿದೆ. ತಳಮಟ್ಟದಲ್ಲಿ ಜನರಿಗೆ ಸಹಾಯ ಮಾಡಲಾಗುತ್ತಿದೆ. ಹೀಗಾಗಿ ಸಮಾಜದ ಕಟ್ಟಕಡೆಯ ವ್ಯಕ್ತಿ ಕೂಡ ಧ್ವನಿ ಎತ್ತುವುದು ಅನಿವಾರ್ಯವಾಗಿದೆ ಎಂದು ಹೇಳಿದರು
