ಧಾರ್ಮಿಕ ಭಾವನೆಗೆ ಧಕ್ಕೆ: ಸಾಹಿತಿ ಕೆ.ಎಸ್. ಭಗವಾನ್ ವಿರುದ್ಧ ಜಾಮೀನು ರಹಿತ ವಾರಂಟ್ – Vishwanews24

Featured, ರಾಜ್ಯ ನ್ಯೂಸ್

ಧಾರ್ಮಿಕ ಭಾವನೆಗೆ ಧಕ್ಕೆ: ಸಾಹಿತಿ ಕೆ.ಎಸ್. ಭಗವಾನ್ ವಿರುದ್ಧ ಜಾಮೀನು ರಹಿತ ವಾರಂಟ್

ಸಾಗರ: ಧಾರ್ಮಿಕ ಭಾವನೆಗೆ ಧಕ್ಕೆ ತರುವ ರೀತಿಯಲ್ಲಿ ಕೃತಿ ರಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಜೆಎಂಎಫ್‌ಸಿ ನ್ಯಾಯಾಲಯ ಸಾಹಿತಿ ಕೆ.ಎಸ್. ಭಗವಾನ್ ವಿರುದ್ಧ ಬುಧವಾರ ಜಾಮೀನು ರಹಿತ ವಾರಂಟ್ ಹೊರಡಿಸಿದೆ.

ಭಗವಾನ್ ಅವರು ತಮ್ಮ ‘ರಾಮ ಮಂದಿರ ಏಕೆ ಬೇಡ’ ಕೃತಿಯಲ್ಲಿ ಹಿಂದೂ ಧರ್ಮೀಯರ ಭಾವನೆಗೆ ಧಕ್ಕೆ ತರುವ ಸಂಗತಿಗಳನ್ನು ನಿರೂಪಿಸಿದ್ದಾರೆ ಎಂದು ಆರೋಪಿಸಿ ಮಹಾಬಲೇಶ್ವರ ಎಂಬುವವರು ಇಲ್ಲಿನ ಜೆಎಂಎಫ್‌ ಸಿ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.

ಈ ದೂರಿನ ವಿಚಾರಣೆ ನಡೆಸಿದ ನ್ಯಾಯಾಲಯ, ಭಗವಾನ್ ವಿರುದ್ಧ ಪ್ರಕರಣ ದಾಖಲಿಸಿ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾಜರಾಗುವಂತೆ ಸಮನ್ಸ್‌ ಹೊರಡಿಸಿತ್ತು. ಸಮನ್ಸ್‌ ಜಾರಿಯಾದರೂ ಬುಧವಾರ ಭಗವಾನ್ ಅವರು ನ್ಯಾಯಾಲಯಕ್ಕೆ ಹಾಜರಾಗದ ಕಾರಣ ಅವರ ವಿರುದ್ಧ ಜಾಮೀನುರಹಿತ ಬಂಧನದ ವಾರಂಟ್ ಹೊರಡಿಸಿದೆ.

ಬಂಡೆಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ..📛ಪೊಲೀಸ್‌ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡ ಕಣ್ಣೂರು ಮಠದ ಮೃತ್ಯುಂಜಯ ಶ್ರೀ – Vishwanews24

Leave a Reply