ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

Featured, ರಾಜ್ಯ ನ್ಯೂಸ್

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್ ಬಹಿರಂಗ : ಯು.ಟಿ.ಖಾದರ್ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ನಕಲಿ ಔಷಧಿ ಜಾಲದ ಬೆಚ್ಚಿಬೀಳಿಸುವ ಸತ್ಯಗಳು ಹೊರಬರುತ್ತಿದ್ದು, ಈಗ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ಹಾಗೂ ಮೆಡಿಕಲ್ ಸ್ಟೋರ್‌ಗಳು ಸಹ ಈ ಜಾಲದಲ್ಲಿ ಸಿಲುಕಿರುವುದು ಬಯಲಾಗಿದೆ. ಸ್ವತಃ ಆರೋಗ್ಯ ಸಚಿವ ಯು.ಟಿ. ಖಾದರ್ ಈ ಆತಂಕಕಾರಿ ವಿಚಾರವನ್ನು ಬಹಿರಂಗಪಡಿಸಿದ್ದು, ಸಾರ್ವಜನಿಕರಲ್ಲಿ ಭಾರೀ ಆತಂಕ ಮೂಡಿಸಿದೆ.

ನಕಲಿ ಔಷಧಿ ಜಾಲದ ಮೂಲವನ್ನು ಹುಡುಕಲು ಸರ್ಕಾರ ಎಸ್‌ಐಟಿ ತನಿಖೆಗೆ ಆದೇಶಿಸಿದ್ದು, ತನಿಖೆ ಆಳಕ್ಕೆ ಹೋದಂತೆಲ್ಲ ಹೊಸ ವಿಚಾರಗಳು ಬೆಳಕಿಗೆ ಬರುತ್ತಿವೆ. ಈಗಾಗಲೇ ಈ ಜಾಲದಲ್ಲಿ ಭಾಗಿಯಾಗಿದ್ದ 24 ಪ್ರಮುಖ ಔಷಧ ಸಂಸ್ಥೆಗಳ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗಿದೆ. ಆದರೆ ಇದು ಕೇವಲ ಸ್ಯಾಂಪಲ್ ಅಷ್ಟೇ; ಬೃಹತ್ ಖಾಸಗಿ ಆಸ್ಪತ್ರೆಗಳಿಗೂ ಈ ಔಷಧಿಗಳು ಸರಬರಾಜಾಗಿರುವುದು ಖಚಿತವಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಇದೇ ವೇಳೆ, ಜಾಗತಿಕ ಔಷಧ ದೈತ್ಯ ‘ಫೈಜರ್’ (Pfizer) ಕಂಪನಿಯ ವಿರುದ್ಧವೂ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ. ಈ ಹಿಂದೆ ಫೈಜರ್ ಕಂಪನಿಯ ಕೆಲ ಔಷಧಿಗಳು ನಕಲಿ ಎಂದು ತಿಳಿದುಬಂದಾಗ ಕಂಪನಿಯ ಲೈಸೆನ್ಸ್ ಅನ್ನು ಅಮಾನತುಗೊಳಿಸಲಾಗಿತ್ತು. ಆದಾಗ್ಯೂ, ತನಿಖೆ ಮತ್ತು ವಿಚಾರಣೆ ವೇಳೆ ಫೈಜರ್ ಕಂಪನಿಯು ಸರ್ಕಾರಕ್ಕೆ ಸರಿಯಾದ ಸಹಕಾರ ನೀಡದ ಹಿನ್ನೆಲೆಯಲ್ಲಿ, ಈಗ ಸರ್ಕಾರ ಮತ್ತೆ ಖಡಕ್ ನಿರ್ಧಾರ ಕೈಗೊಳ್ಳಲು ಸಜ್ಜಾಗಿದೆ.

ಖಾಸಗಿ ಆಸ್ಪತ್ರೆಗಳು ಹಾಗೂ ಮೆಡಿಕಲ್ ಸ್ಟೋರ್‌ಗಳಿಗೆ ಯಾವೆಲ್ಲಾ ನಕಲಿ ಔಷಧಿಗಳು ಸರಬರಾಜಾಗಿವೆಯೋ, ಆ ಎಲ್ಲಾ ಸ್ಟಾಕ್‌ಗಳನ್ನು ತಕ್ಷಣವೇ ಹಿಂಪಡೆಯಲು (Withdrawn) ಕ್ರಮ ಕೈಗೊಳ್ಳಲಾಗುತ್ತಿದೆ. ನಕಲಿ ಔಷಧಿ ಜಾಲದಲ್ಲಿ ಭಾಗಿಯಾಗಿರುವ ಪ್ರಭಾವಿ ಆಸ್ಪತ್ರೆಗಳ ಪಟ್ಟಿಯನ್ನು ಸದ್ಯದಲ್ಲೇ ಸರ್ಕಾರ ಅಧಿಕೃತವಾಗಿ ಬಿಡುಗಡೆ ಮಾಡಲಿದೆ ಎಂದು ಹೆಚ್‌ಎಮ್‌ಡಿ ತಿಳಿಸಿದೆ.

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

ಇದರ ಜೊತೆಗೆ, ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಕಾರ್ಯಾಚರಿಸುತ್ತಿರುವ ಖಾಸಗಿ ಮೆಡಿಕಲ್ ಸ್ಟೋರ್‌ಗಳ ಮೇಲೆಯೂ ಕಣ್ಣಿಡಲಾಗಿದ್ದು, ಶೀಘ್ರದಲ್ಲೇ ಅವುಗಳ ತಪಾಸಣೆ ಮತ್ತು ಶೋಧ ಕಾರ್ಯವನ್ನು ತೀವ್ರಗೊಳಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ.

 

Leave a Reply