ನಟಿ ರನ್ಯಾ ಬೆನ್ನಲ್ಲೇ ಮತ್ತಿಬ್ಬರು ಸ್ಯಾಂಡಲ್‌ವುಡ್ ಡ್ರಗ್ಸ್ ಕೇಸ್ ಇಬ್ಬರು ನಟಿಯರಿಗೆ ಸಿಸಿಬಿ ಶಾಕ್  – vishwanews24

Featured, ರಾಜ್ಯ ನ್ಯೂಸ್

ನಟಿ ರನ್ಯಾ ಬೆನ್ನಲ್ಲೇ ಮತ್ತಿಬ್ಬರು ಸ್ಯಾಂಡಲ್‌ವುಡ್ ಡ್ರಗ್ಸ್ ಕೇಸ್ ಇಬ್ಬರು ನಟಿಯರಿಗೆ ಸಿಸಿಬಿ ಶಾಕ್ 

ರಾಗಿಣಿ ಹಾಗೂ ಸಂಜನಾ ವಿರುದ್ಧ ಎಫ್‌ಐಆರ್ ರದ್ದು ಪ್ರಶ್ನಿಸಿ ಸುಪ್ರೀಂ‌ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಸಿಸಿಬಿ ಸಿದ್ಧತೆ

ನಟಿ ರನ್ಯಾ ರಾವ್ ಬೆನ್ನಲ್ಲೇ ಮತ್ತಿಬ್ಬರು ಸ್ಯಾಂಡಲ್‌ವುಡ್ ನಟಿಯರಿಗೆ ಮಾಸ್ಟರ್ ಸ್ಟ್ರೋಕ್ ಎದುರಾಗಿದೆ. ಸ್ಯಾಂಡಲ್‌ವುಡ್ ಡ್ರಗ್ಸ್ ಕೇಸಲ್ಲಿ ಇಬ್ಬರು ನಟಿಯರಿಗೆ ಸಿಸಿಬಿ ಶಾಕ್ ನೀಡಿದೆ.

ನಟಿ ಸಂಜನಾ ಮತ್ತು ರಾಗಿಣಿ ಎಫ್‌ಐಆರ್ ರದ್ದು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಸಿಸಿಬಿ ಮೇಲ್ಮನವಿ ಅರ್ಜಿ ಸಲ್ಲಿಸಿದೆ.

ಸಿಸಿಬಿ ಡ್ರಗ್ಸ್ ಕೇಸಲ್ಲಿ ಎಫ್‌ಐಆರ್ ರದ್ದುಗೊಳಿಸುವಂತೆ ಹೈಕೋರ್ಟ್ ನಟಿಯರು ಅರ್ಜಿ ಸಲ್ಲಿಸಿದ್ದರು. ನಟಿ ಸಂಜನಾ ಗಲ್ರಾನಿ, ರಾಗಿಣಿ ದ್ವಿವೇದಿ ಹಾಗೂ ವೀರೇನ್ ಖನ್ನಾನ ಎಫ್‌ಐಆರ್ ಅನ್ನು ಹೈಕೋರ್ಟ್ ರದ್ದು ಮಾಡಿತ್ತು.

ಮೂಡಬಿದಿರೆ -: ಬಾಲಕಿಗೆ ಕಿರುಕುಳ ಪ್ರಕರಣ; ಆರೋಪಿ ಸೆರೆ – vishwanews24

ಗೃಹ ಇಲಾಖೆ ಮತ್ತು ಕಾನೂನು ಇಲಾಖೆಯ ಸಮ್ಮತಿ ಬಳಿಕ ಸುಪ್ರೀಂಗೆ ಸಿಸಿಬಿ ಮೇಲ್ಮನವಿ ಅರ್ಜಿ ಸಲ್ಲಿಸಿದೆ. ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಹೋಗಲು ಕಾನೂನು ಇಲಾಖೆ ಅಸ್ತು ಎಂದಿತ್ತು. ಆ ಬಳಿಕ ಗೃಹ ಇಲಾಖೆಯಿಂದ ಅನುಮತಿ ಪಡೆದು ಸುಪ್ರೀಂಗೆ ಮೇಲ್ಮನವಿ ಸಲ್ಲಿಸಿದೆ. ಹೈಕೋರ್ಟ್ ಆದೇಶ ರದ್ದುಗೊಳಿಸುವಂತೆ ಸಿಸಿಬಿ, ಸುಪ್ರೀಂ ಮೊರೆ ಹೋಗಿದೆ.

Leave a Reply