ನಟ ದೊಡ್ಡಣ್ಣ ನಿಧನ ಎಂದು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ವೈರಲ್ – vishwanews24

Featured, ರಾಜ್ಯ ನ್ಯೂಸ್

ಆರೋಗ್ಯವಾಗಿದ್ದೇನೆ, ಆತಂಕ ಬೇಡ: ದೊಡ್ಡಣ್ಣ ಪ್ರತಿಕ್ರಿಯೆ

ಬೆಂಗಳೂರು: ಹಿರಿಯ ಚಿತ್ರನಟ ದೊಡ್ಡಣ್ಣ ನಿಧನರಾಗಿದ್ದಾರೆ ಎಂಬ ಸುಳ್ಳು ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಖುದ್ದು ದೊಡ್ಡಣ್ಣ ಅವರೇ “ತಾನು ಆರೋಗ್ಯವಾಗಿದ್ದೇನೆ” ಎಂದು ಸ್ಪಷ್ಟನೆ ನೀಡಿದ್ದಾರೆ.

ದೊಡ್ಡಣ್ಣ ನಿಧನರಾಗಿದ್ದಾರೆ ಎಐ ನಿರ್ಮಿತ ಪೋಸ್ಟರ್ ವೊಂದು ಶುಕ್ರವಾರ ಬೆಳಗ್ಗಿನಿಂದ ಸಾಮಾಜಿಕ ತಾಣದಲ್ಲಿ ಹರಿದಾಡುತ್ತಿದೆ. ಇದು ಗೊಂದಲಕ್ಕೆ ಕಾರಣವಾಗಿತ್ತು. ಈ ಬಗ್ಗೆ ಸುದ್ದಿವಾಹಿನಿಯೊಂದಕ್ಕೆ ಖುದ್ದು ಪ್ರತಿಕ್ರಿಯೆ ನೀಡಿರುವ 76ರ ಹರೆಯದ ದೊಡ್ಡಣ್ಣ, “ನಾನು ಸಂಪೂರ್ಣವಾಗಿ ಆರೋಗ್ಯವಾಗಿದ್ದು, ಮನೆಯಲ್ಲಿ ಟಿವಿ ನೋಡುತ್ತಾ ಕ್ಷೇಮವಾಗಿದ್ದೇನೆ ಎಂದು ಹೇಳಿದ್ದಾರೆ.

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಪ್ರಕ್ರಿಯೆಗೆ ಚಾಲನೆ : ಅರ್ಜಿ ಸಲ್ಲಿಸಲು ಸೂಚನೆ – vishwanews24

Leave a Reply