ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

Featured, ರಾಜ್ಯ ನ್ಯೂಸ್

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ

ಬೆಂಗಳೂರು: ಮತದಾರರ ಪಟ್ಟಿಯಿಂದ ತಮ್ಮ ಹೆಸರು ಕೈಬಿಡಲಾಗಿದೆ ಎಂದು ನಟ ಪ್ರಕಾಶ್ ರಾಜ್ ಮಾಡಿರುವ ಆರೋಪ ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿದೆ ಎಂದು ಬೆಂಗಳೂರು ಕೇಂದ್ರ ನಗರ ಪಾಲಿಕೆ ಸ್ಪಷ್ಟಪಡಿಸಿದೆ. ಪ್ರಕಾಶ್ ರಾಜ್ ಅವರು ಶಾಂತಿನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಗಾರ್ಡನ್ ಅಪಾರ್ಟ್‌ಮೆಂಟ್ ವಿಳಾಸದಲ್ಲಿ ನೋಂದಾಯಿತರಾಗಿದ್ದರು.

ಆದರೆ ಬೂತ್ ಮಟ್ಟದ ಅಧಿಕಾರಿ ನಡೆಸಿದ ಪರಿಶೀಲನೆಯಲ್ಲಿ ಅವರು ಕಳೆದ ನಾಲ್ಕು ವರ್ಷಗಳಿಂದ ಆ ವಿಳಾಸದಲ್ಲಿ ವಾಸಿಸುತ್ತಿಲ್ಲ ಎಂಬುದು ತಿಳಿದುಬಂದಿದೆ. ಅಪಾರ್ಟ್‌ಮೆಂಟ್ ಮಾಲೀಕರು ಮತ್ತು ಪ್ರಾಪರ್ಟಿ ಮ್ಯಾನೇಜರ್ ಅವರ ಹೇಳಿಕೆ ಹಾಗೂ ಮಹಜರು ಆಧರಿಸಿ, ಚುನಾವಣಾ ಆಯೋಗದ ನಿಯಮಗಳ ಪ್ರಕಾರ ಅವರ ಹೆಸರನ್ನು ಸ್ಥಳಾಂತರಗೊಂಡಿದೆ ಎಂದು ಗುರುತಿಸಲಾಗಿದೆ.

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ಅಧಿಕಾರಿಗಳು ಪ್ರಕಾಶ್ ರಾಜ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದು, ಅವರು ಪ್ರಸ್ತುತ ಅದೇ ಕ್ಷೇತ್ರದ ಬೇರೊಂದು ವಿಳಾಸದಲ್ಲಿ ವಾಸಿಸುತ್ತಿರುವುದಾಗಿ ತಿಳಿಸಿದ್ದಾರೆ. ಹೊಸ ವಿಳಾಸದಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ನಮೂನೆ-ಆರು ಸಲ್ಲಿಸುವಂತೆ ಅವರಿಗೆ ಸೂಚಿಸಲಾಗಿದೆ ಎಂದು ಪಾಲಿಕೆ ಆಯುಕ್ತ ಜಗದೀಶ್ ಮಾಧ್ಯಮ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

Leave a Reply