ನಟ ಸಂಚಾರಿ ವಿಜಯ್ ಹುಟ್ಟೂರು ಪಂಚನಹಳ್ಳಿಯಲ್ಲಿ ಇಂದು ಅಂತ್ಯಕ್ರಿಯೆ : ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ -Vishwanews24
ನಟ ಸಂಚಾರಿ ವಿಜಯ್ ಹುಟ್ಟೂರು ಪಂಚನಹಳ್ಳಿಯಲ್ಲಿ ಇಂದು ಅಂತ್ಯಕ್ರಿಯೆ : ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ -Vishwanews24
ಬೆಂಗಳೂರು : ಬೈಕ್ ಅಪಘಾತದಲ್ಲಿ ತಲೆಗೆ ತೀವ್ರವಾಗಿ ಪೆಟ್ಟು ಬಿದ್ದು ಬನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ನಟ ಸಂಚಾರಿ ವಿಜಯ್, ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ 3.34 ಕ್ಕೆ ಸಾವನ್ನಪ್ಪಿದ್ದಾರೆ ಎಂಬುದಾಗಿ ಅಪೋಲೋ ಆಸ್ಪತ್ರೆಯ ವೈದ್ಯರು ಸ್ಪಷ್ಟ ಪಡಿಸಿದ್ದಾರೆ.
ನಟ ಸಂಚಾರಿ ವಿಜಯ್ ಅವರ ಹುಟ್ಟೂರು ಕಡೂರು ತಾಲೂಕಿನ ಪಂಚನಹಳ್ಳಿಯಲ್ಲಿ ಇಂದು ಸಂಜೆ ಅಂತ್ಯಕ್ರಿಯೆ ನೆರವೇರಲಿದ್ದು, ಇಂದು ಬೆಳಿಗ್ಗೆ 8 ರಿಂದ 10 ಗಂಟೆಯವರೆಗೆ ರವೀಂದ್ರ ಕಲಾಕ್ಷೇತ್ರದಲ್ಲೂ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಈ ಕುರಿತಂತೆ ನಟ ಸಂಚಾರಿ ವಿಜಯ್ ಅವರ ಕುಟುಂಬಸ್ಥರಿಂದ ಮಾಹಿತಿ ತಿಳಿದು ಬಂದಿದ್ದು, ಜೀವಸಾರ್ಥಕ ಪೌಂಢೇಶನ್ ಮೂಲಕ ಅವರ ಅಂಗಾಂಗ ದಾನ ಪ್ರಕ್ರಿಯೆ ಕೂಡ ನಡೆಯುತ್ತಿದ್ದು, ಕಾನೂನಾತ್ಮಕ ಪ್ರಕ್ರಿಯೆ ಬೆಳಿಗ್ಗೆಯವರೆಗೆ ನಡೆಯುವ ಸಾಧ್ಯತೆ ಇದೆ. ಇಂದು ಸಂಜೆ ಅವರ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಪಂಚನಹಳ್ಳಿ ಅಂತ್ಯ ಸಂಸ್ಕಾರ ನಡೆಯಲಿದೆ
ಇನ್ನೂ ಸಂಚಾರಿ ವಿಜಯ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೂ ಇಂದು ಬೆಳಿಗ್ಗೆ 8 ರಿಂದ 10 ಗಂಟೆಯವರೆಗೆ ರವೀಂದ್ರ ಕಲಾ ಕ್ಷೇತ್ರದಲ್ಲಿ ಅವಕಾಶ ಮಾಡಿಕೊಡಲಾಗಿದ್ದು, ಈ ಬಳಿಕ ಸಂಜೆಯ ವೇಳೆಯಲ್ಲಿ ಅವರ ಹುಟ್ಟೂರಿನಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ.
