ನನ್ನ ಪದ ಬಳಕೆಯಿಂದ ನೋವಾಗಿದ್ದರೆ ಕ್ಷಮೆ ಇರಲಿ : ಬಿ.ವೈ. ವಿಜಯೇಂದ್ರ – vishwanews24
ಆಕ್ರೋಶದಿಂದ ಮಾತನಾಡಿದ್ದೇನೆಯೇ ಹೊರತು ಉದ್ದೇಶಪೂರ್ವಕವಾಗಿರಲಿಲ್ಲ..
ನನ್ನ ಪದ ಬಳಕೆಯಿಂದ ನೋವಾಗಿದ್ದರೆ ಕ್ಷಮೆ ಇರಲಿ ..
ಕಾಂಗ್ರೆಸ್ ವಿರುದ್ಧ ಏಕವಚನ ಪದ ಬಳಕೆಗೆ ವಿಜಯೇಂದ್ರ ಕ್ಷಮೆ ಯಾಚನೆ ..
ಬೆಂಗಳೂರು: “ಕಳೆದ ವಾರ ದಾವಣಗೆರೆಯಲ್ಲಿ ಕಾಂಗ್ರೆಸ್ ವಿರುದ್ಧ ಆಕ್ರೋಶದಿಂದ ಮಾತನಾಡಿದ್ದೇನೆ. ನನ್ನ ಪದ ಬಳಕೆಯಿಂದ ನೋವಾಗಿದ್ದರೆ ಕ್ಷಮೆ ಇರಲಿ. ಯಾರನ್ನೂ ಉದ್ದೇಶಪೂರ್ವಕವಾಗಿ ನೋಯಿಸುವ ಆಲೋಚನೆ ಇರಲಿಲ್ಲ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸ್ಪಷ್ಟನೆ ನೀಡಿದ್ದಾರೆ.
ಅವರು ನಗರದಲ್ಲಿಂದು ಮಾಧ್ಯಮದವರ ಜೊತೆ ಮಾತನಾಡುತ್ತಿದ್ದರು.
ಇದನ್ನೂ ಓದಿ :
ಎಸ್ಸಿ/ಎಸ್ಟಿ ಮೀಸಲಾತಿ ಹೆಚ್ಚಳ ಕಾಯ್ದೆಯನ್ನು ಹೈಕೋರ್ಟ್ ರದ್ದುಪಡಿಸಿದ ವಿಚಾರ ಹಾಗೂ ಹಾಲಿನ ದರ ಏರಿಕೆಯ ಕುರಿತು ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ, ದಾವಣಗೆರೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿ.ವೈ. ವಿಜಯೇಂದ್ರ, “ಈ ನನ್ ಮಕ್ಕಳು ಕಾಂಗ್ರೆಸ್ ನವರು ಇದ್ದಾರಲ್ಲಾ.. ಎಂದು ಏಕವಚನದಲ್ಲಿ ಟೀಕಿಸಿದ್ದು ವಿವಾದಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಅವರು ಇದೀಗ ಆಕ್ರೋಶದಿಂದ ಮಾತನಾಡಿದ್ದೇನೆಯೇ ಹೊರತು ಉದ್ದೇಶಪೂರ್ವಕವಾಗಿರಲಿಲ್ಲ, ನನ್ನ ಪದ ಬಳಕೆಯಿಂದ ನೋವಾಗಿದ್ದರೆ ಕ್ಷಮೆ ಇರಲಿ ಎಂದು ಹೇಳಿದ್ದಾರೆ.
