BREAKING – ನನ್ನ ಸಾವಿಗೆ ಕೆ.ಎಸ್.ಈಶ್ವರಪ್ಪ ಕಾರಣ ; ಬೆಳಗಾವಿ ಗುತ್ತಿಗೆದಾರ ಉಡುಪಿಯಲ್ಲಿ ಆತ್ಮಹತ್ಯೆಗೆ ಶರಣು – Vishwanews24
ಸಚಿವ ಈಶ್ವರಪ್ಪ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದ ಸಂತೋಷ್ ಪಾಟೀಲ್
ಉಡುಪಿಯ ಶಾಂಭವಿ ಹೋಟೆಲ್ನಲ್ಲಿ ಆತ್ಮಹತ್ಯೆಗೆ ಶರಣಾದ ಸಂತೋಷ್ ಪಾಟೀಲ್
‘ನನ್ನ ಸಾವಿಗೆ ಸಚಿವ ಈಶ್ವರಪ್ಪನೇ ಕಾರಣ’ ಎಂದು ಡೆತ್ ಮೆಸೇಜ್ ಕಳುಹಿಸಿ ಸಾವು
ಉಡುಪಿ : ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಶೇಕಡಾ 40 ಪರ್ಸೆಂಟೇಜ್ ಆರೋಪ ಮಾಡಿದ್ದ ಬೆಳಗಾವಿ ಬಿಜೆಪಿ ಕಾರ್ಯಕರ್ತ ಹಾಗೂ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಮಾಧ್ಯಮದ ಪ್ರತಿನಿಧಿಗಳಿಗೆ ವಾಟ್ಸಪ್ ಸಂದೇಶ ರವಾನಿಸಿ ಉಡುಪಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬೆಳಗಾವಿ ತಾಲೂಕಿನ ಹಿಂಡಲಗಾ ಗ್ರಾಮದ ಗುತ್ತಿಗೆದಾರ ಮತ್ತು ಬಿಜೆಪಿ ಕಾರ್ಯಕರ್ತರಾಗಿದ್ದ ಸಂತೋಷ್ ಪಾಟೀಲ್ ಮಾಧ್ಯಮ ಪತ್ರಿನಿಧಿಗಳಿಗೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಡರಾತ್ರಿ ವಾಟ್ಸಪ್ ಮೆಸೇಜ್ ಮಾಡಿದ್ದಾರೆ. ಈ ಬಗ್ಗೆ ಮಾಧ್ಯಮಪ್ರತಿನಿಧಿಗಳು ಬೆಳಗಾವಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಅವರಿಗಾಗಿ ಹುಡುಕಾಟ ನಡೆಸಿದ ಪೊಲೀಸರಿಗೆ ಉಡುಪಿಯ ಲಾಡ್ಜ್ವೊಂದರಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಸಂತೋಷ್ ಪಾಟೀಲ್ ಪತ್ತೆಯಾಗಿದ್ದಾರೆ.
ಮೊಬೈಲ್ನಲ್ಲಿ ವಾಟ್ಸಾಪ್ ಸಂದೇಶ ಕಳುಹಿಸಿದ್ದ ಸಂತೋಷ್ ಪಾಟೀಲ್ ನನ್ನ ಸಾವಿಗೆ ಕೆ.ಎಸ್.ಈಶ್ವರಪ್ಪ ಕಾರಣ ಎಂದು ಉಲ್ಲೇಖಿಸಿದ್ದರು. ಈಶ್ವರಪ್ಪ ಅವರಿಗೆ ಶಿಕ್ಷೆಯಾಗಬೇಕು. ನನ್ನೆಲ್ಲಾ ಆಸೆ ಬದಿಗೊತ್ತಿ ಆತ್ಮಹತ್ಯೆ ನಿರ್ಧಾರ ಮಾಡಿದ್ದೇನೆ. ನನ್ನ ಹೆಂಡತಿ ಮಕ್ಕಳಿಗೆ ಪ್ರಧಾನಿಗಳು, ಮುಖ್ಯಮಂತ್ರಿಗಳು, ಬಿ.ಎಸ್.ಯಡಿಯೂರಪ್ಪ ಸಹಾಯ ಮಾಡಬೇಕೆಂದು ಪತ್ರದಲ್ಲಿ ತಿಳಿಸಿದ್ದರು.
ವೇಣೂರು ಜೋಡುಕರೆ ಕಂಬಳದಲ್ಲಿ ದಾಖಲೆ ಸೃಷ್ಟಿಸಿದ ನಿಶಾಂತ್ ಶೆಟ್ಟಿ – Vishwanews24
