ನಮ್ಮಲ್ಲಿ ಯಾವುದೇ ರಾಜಕೀಯ ಗೊಂದಲವಿಲ್ಲ : ಸಿಎಂ ಬಿ.ಎಸ್.ಯಡಿಯೂರಪ್ಪ -Vishwanews24
ನಮ್ಮಲ್ಲಿ ಯಾವುದೇ ರಾಜಕೀಯ ಗೊಂದಲವಿಲ್ಲ : ಸಿಎಂ ಬಿ.ಎಸ್.ಯಡಿಯೂರಪ್ಪ -Vishwanews24
ಬೆಂಗಳೂರು: ನಮ್ಮಲ್ಲಿ ಯಾವುದೇ ರಾಜಕೀಯ ಗೊಂದಲವಿಲ್ಲ. ಯಾರೋ ಒಬ್ಬಿಬ್ಬರು ಮಾತನಾಡಿದರೆ ಗೊಂದಲವಾಗುವುದಿಲ್ಲ, ಎಲ್ಲಾ ಒಟ್ಟಾಗಿದ್ದೇವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದಿಬ್ಬರು ಮಾತನಾಡುತ್ತಾ ಇದ್ದಾರೆ. ಅವರನ್ನು ಕರೆದು ಮಾತನಾಡುತ್ತೇವೆ ಎಂದರು.
ರಾಜ್ಯದಲ್ಲಿ ಮುಂಗಾರು ಪ್ರಾರಂಭವಾಗಿದೆ. ಉತ್ತಮ ಮಳೆಯಾಗಿದೆ. ರೈತರು ಬಿತ್ತನೆ ಪ್ರಾರಂಭ ಮಾಡಿದ್ದಾರೆ. ಬೀಜಗಳು, ರಸಗೊಬ್ಬರ ಸಿಗುವುದಕ್ಕೆ ವ್ಯವಸ್ಥೆ ಮಾಡಿದ್ದೇವೆ. ಪ್ರವಾಹ ನಿರ್ವಹಣೆಯ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದ ಅವರು, ನಾಳೆ ಮಹಾರಾಷ್ಟ್ರ ನೀರಾವರಿ ಸಚಿವರು ಬರುತ್ತಿದ್ದಾರೆ. ಅವರ ಜೊತೆ ಚರ್ಚೆ ಮಾಡುತ್ತೇವೆ ಎಂದರು.
