ನವೆಂಬರ್ ವೇಳೆಗೆ ರಾಜ್ಯ ರಾಜಕಾರಣದಲ್ಲಿ ಬಾರಿ ಬದಲಾವಣೆಗಳು ಆಗಲಿವೆ, ಕಾಯ್ದು ನೋಡಿ : ಎಚ್.ಡಿ.ಕುಮಾರಸ್ವಾಮಿ – Vishwanews24
ನವೆಂಬರ್ ವೇಳೆಗೆ ರಾಜ್ಯ ರಾಜಕಾರಣದಲ್ಲಿ ಬಾರಿ ಬದಲಾವಣೆಗಳು ಆಗಲಿವೆ, ಕಾಯ್ದು ನೋಡಿ : ಎಚ್.ಡಿ.ಕುಮಾರಸ್ವಾಮಿ
ಬಿಜೆಪಿಯವರು ಲೂಟಿ ಮಾಡಿದ ರೀತಿಯಲ್ಲೆ ಕಾಂಗ್ರೆಸ್ ನವರು ಲೊಟಿಗೆ ಇಳಿಯಲಿದ್ದಾರೆ ..
ರಾಮನಗರ: ನವೆಂಬರ್ ವೇಳೆಗೆ ರಾಜ್ಯ ರಾಜಕಾರಣದಲ್ಲಿ ಬಾರಿ ಬದಲಾವಣೆಗಳು ಆಗಲಿವೆ, ಕಾಯ್ದು ನೋಡಿ ಎಂದು ಹೇಳುವ ಮೂಲಕ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.
ಚುನಾವಣಾ ಫಲಿತಾಂಶ ಪ್ರಕಟಗೊಂಡ ಬಳಿಕ ಇದೇ ಮೊದಲ ಬಾರಿಗೆ ಸಾರ್ವಜನಿಕ ಸಮಾರಂಭದಲ್ಲಿ ಎಚ್‌ಡಿಕೆ ಕಾಣಿಸಿಕೊಂಡಿದ್ದಾರೆ. ತಮ್ಮ ಸ್ವಕ್ಷೇತ್ರದ ಮತದಾರರಿಗೆ ಕೃತಜ್ಞತಾ ಸಭೆ ನಡೆಸಿ ಮಾತನಾಡಿದ ಅವರು, ಬಹುಮತದ ಸರ್ಕಾರ ಬಂದಿದೆ ಎಂದು ಭಾವಿಸಬೇಡಿ. ಲೋಕಸಭಾ ಚುನಾವಣೆ ಬಳಿಕ ಏನು ಬೆಳವಣಿಗೆ ಆಗುತ್ತದೆ ಎಂದು ನೋಡೋಣ. ಈಗಿನ ರಾಜಕೀಯ ಬೆಳವಣಿಗೆ ಬಗ್ಗೆ ಯಾವುದೇ ಅಂಜಿಕೆ ಬೇಡ ಎಂದರು.
ಇವರೂ ಲೂಟಿ ಮಾಡ್ತಾರೆ: ಬಿಜೆಪಿಯವರು ಲೂಟಿ ಮಾಡಿದ ರೀತಿಯಲ್ಲೆ ಕಾಂಗ್ರೆಸ್ ನವರು ಲೊಟಿಗೆ ಇಳಿಯಲಿದ್ದಾರೆ ಅದರಲ್ಲೇನು ಹೊಸತಿಲ್ಲ, ಯಾರನ್ನು ಎಲ್ಲಿ ಹಿಡಿಯಬೇಕೆಂದು ನನಗೆ ಚೆನ್ನಾಗಿ ತಿಳಿದಿದೆ. ನಾನು ಹೋರಾಟ ಮಾಡಲು ಸಿದ್ದನಿದ್ದೇನೆ, ಯಾವುದೇ ಕಾರಣಕ್ಕೂ ಈ ಸರ್ಕಾರದ ಮಂತ್ರಿಗಳ ಬಳಿ ಕೈ ಚಾಚುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಕಂಬಳ ಹಾಗೂ ಜಲ್ಲಿಕಟ್ಟು ಸ್ಪರ್ಧೆಗೆ ಅವಕಾಶ : ಸುಪ್ರೀಂಕೋರ್ಟ್‌ನಿಂದ ಮಹತ್ವದ ತೀರ್ಪು – Vishwanews24
ಕಾಂಗ್ರೆಸ್ ಗ್ಯಾರಂಟಿ ಜಾರಿಯಾಗಲ್ಲ: ಕಾಂಗ್ರೆಸ್ ಪಕ್ಷ ನೀಡಿರುವ ಗ್ಯಾರಂಟಿ ಸೇರಿದಂತೆ ಯಾವುದೇ ಯೋಜನೆಯನ್ನು ಜಾರಿಗೆ ತರುವುದು ಸುಲಭವಲ್ಲ. ಈ ಹಿಂದೆ ಜಾರಿಯಲ್ಲಿರುವ ಕಾರ್ಯಕ್ರಮಗಳೇ ಮುಂದುವರಿಯುವ ಅನುಮಾನವಿದೆ. ಅವರ ಯೋಜನೆಗಳಿಗೆ 60 ರಿಂದ 70 ಸಾವಿರ ಕೋಟಿ ರೂ. ಬೇಕು. ಅವರು ಎಲ್ಲಿಂದ ಅನುದಾನ ತರುತ್ತಾರೆ. ಇನ್ನೂ ರಸ್ತೆ, ನೀರಾವರಿ ಸೇರಿದಂತೆ ಹಲವು ಕಾರ್ಯಕ್ರಮಗಳ ವೇಗ ಯಾವ ರೀತಿ ಹಣ ಹೊಂದಿಸುತ್ತಾರೆ. ಇವರ ಅಭಿವೃದ್ದಿ ಹೇಗೆ ಇರಲಿದೆ ಕಾದು ನೋಡಿ, ದೊಡ್ಡ ಅಭಿವೃದ್ಧಿ ಕಾರ್ಯಗಳು ಈ ಸರ್ಕಾರದಲ್ಲಿ ನಡೆಯುತ್ತದೆ ಎಂದು ಯಾವುದೇ ಕಾರಣಕ್ಕೂ ನಿರೀಕ್ಷೆ ಇಟ್ಟುಕೊಳ್ಳಬೇಡಿ ಎಂದರು.
ಜೆಡಿಎಸ್ ಈ ಬಾರಿ 60 ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಬೇಕಿತ್ತು. ಆದರೆ, ಕೆಲವರ ಪಿತೂರಿ ಮತ್ತು ಸುಳ್ಳು ಆರೋಪಗಳಿಂದ ಎರಡು ಮೂರು ಸಮಾಜದ ಮತಗಳು ನಮ್ಮ ಪಕ್ಷಕ್ಕೆ ಬರಲಿಲ್ಲ. ಜೆಡಿಎಸ್ ಬಿಜೆಪಿ ಜೊತೆ ಹೋಗುತ್ತದೆ ಎಂದು ಸುಳ್ಳು ಸುದ್ದಿ ಹಬ್ಬಿಸಿದರು. ಬಿಜೆಪಿ ರಾಷ್ಟ್ರೀಯ ನಾಯಕರು ಏನೇನು ಮಾಡಿದ್ದಾರೆ ಗೊತ್ತು, ನಮ್ಮನ್ನು ಮುಗಿಸಲು ಹೋಗಿ ಇದೀಗ ಅವರೇ ಮುಗಿದಿದ್ದಾರೆ. ನಮ್ಮ ಕುಟುಂಬ ಇದಕ್ಕಿಂತ ಹೆಚ್ಚಿನ ಆಘಾತವನ್ನು ಎದುರಿಸಿ ನಂತರ ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿದೇವೆ. ದೇವರ ಹಾಗೂ ಜನರ ಅನುಗ್ರಹ ನಮ್ಮ ಪಕ್ಷದ ಮೇಲಿದ್ದು, ಸೋಲಿ ಗೆಲ್ಲಲಿ ಸಂಘಟನೆ ಮುಂದುವರೆಸಲಿದ್ದೇವೆ. ಮುಂದೆ ನಮ್ಮ ಪಕ್ಷ ಸ್ವತಂತ್ರವಾಗಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಭೆಯಲ್ಲಿ ಯುವಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್‌ಕುಮಾರಸ್ವಾಮಿ ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು.
ಜನರ ಕಲ್ಯಾಣ ನಮ್ಮ ಮೊದಲ ಆದ್ಯತೆ , ನಾವು ಒಗ್ಗಟ್ಟಾಗಿ ಎಲ್ಲಾ ಭರವಸೆ ಈಡೇರಿಸುತ್ತೇವೆ : ಡಿಕೆಶಿ – Vishwanews24
