ನಾಗೇಂದ್ರ ರಾಜೀನಾಮೆ ಬಿಜೆಪಿ-ಜೆಡಿಎಸ್ ಹೋರಾಟದ ಫಲ: ಆರ್. ಅಶೋಕ್ – vishwanews24
ನಾಗೇಂದ್ರ ರಾಜೀನಾಮೆ ಬಿಜೆಪಿ-ಜೆಡಿಎಸ್ ಹೋರಾಟದ ಫಲ: ಆರ್. ಅಶೋಕ್
ಬೆಂಗಳೂರು: ನಿರ್ಗಮಿತ ಸಚಿವ ಬಿ. ನಾಗೇಂದ್ರ ರಾಜೀನಾಮೆ ಬಿಜೆಪಿ – ಜೆಡಿಎಸ್ ಹೋರಾಟದ ಫಲ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಬಣ್ಣಿಸಿದರು.
ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವಿಪಕ್ಷ ನಾಯಕರು, ನಾಗೇಂದ್ರ ರಾಜೀನಾಮೆ ಪ್ರಕರಣದ ಕುರಿತು ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಕರ್ನಾಟಕ ವಿಧಾನಸಭೆಯ ಇತಿಹಾಸದಲ್ಲಿ ನಾಗೇಂದ್ರ ರಾಜೀನಾಮೆ ಪ್ರಕರಣ ಅಪರೂಪದ್ದು. ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿ ನಾಗೇಂದ್ರ ವಿಚಾರವನ್ನು ವಿಧಾನಸಭೆಯಲ್ಲಿ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ದಿವೆ. ಜೆಡಿಎಸ್ ಬೆಂಬಲದೊಂದಿಗೆ ಬಿಜೆಪಿ ಹೋರಾಟ ನಡೆಸಿದ್ದು, ನಮ್ಮ ಗುರಿ ಆರಂಭದಿಂದಲೂ ಸ್ಪಷ್ಟವಾಗಿತ್ತು ಎಂದು ಆರ್. ಅಶೋಕ್ ಹೇಳಿದರು.
