ನಾನು ಕಾಂಗ್ರೆಸ್ ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ , ಕಾಂಗ್ರೆಸ್ ಪಕ್ಷದಲ್ಲೇ ಮುಂದುವರೆಯುತ್ತೇನೆ : ಕೆ.ಹೆಚ್. ಮುನಿಯಪ್ಪ ಸ್ಪಷ್ಟನೆ – Vishwanews24
ನಾನು ಕಾಂಗ್ರೆಸ್ ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ , ಕಾಂಗ್ರೆಸ್ ಪಕ್ಷದಲ್ಲೇ ಮುಂದುವರೆಯುತ್ತೇನೆ : ಕೆ.ಹೆಚ್. ಮುನಿಯಪ್ಪ ಸ್ಪಷ್ಟನೆ
ಬೆಂಗಳೂರು : ನಾನು ಕಾಂಗ್ರೆಸ್ ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ಪಕ್ಷದಲ್ಲೇ ಮುಂದುವರೆಯುತ್ತೇನೆ ಎಂದು ಹಿರಿಯ ನಾಯಕ ಕೆ.ಹೆಚ್.ಮುನಿಯಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕಾಂಗ್ರೆಸ್ ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ಪಕ್ಷದಲ್ಲೇ ಮುಂದುವರೆಯುತ್ತೇನೆ, ವರಿಷ್ಠರು ನನ್ನ ಸಮಸ್ಯೆಗಳನ್ನು ಆಲಿಸಿದ್ದಾರೆ. ವರಿಷ್ಠರು ಕೆಲವು ಸಲ ತಮ್ಮದೇ ತೀರ್ಮಾನ ತೆಗೆದುಕೊಳ್ಳುತ್ತಾರೆ. ನಾನು ಸಕ್ರೀಯ ರಾಜಕಾರಣದಲ್ಇ ಮುಂದುವರೆಯುತ್ತೇನೆ. ಕೆಲ ವಿಚಾರಗಳ ಬಗ್ಗೆ ಕಮೆಂಟ್ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಉಡುಪಿ: ನನ್ನ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದ್ದರೆ ದಾಖಲೆ ತೋರಿಸಿ , ವಿನಾಕಾರಣ ಆರೋಪಿಸಬೇಡಿ : ಕೋಟ ಶ್ರೀನಿವಾಸ ಪೂಜಾರಿ – Vishwanews24
ಇಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರನ್ನು ಕೆ.ಹೆಚ್. ಮುನಿಯಪ್ಪ ಭೇಟಿಯಾಗಿ ಒಂದೂವರೆ ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಕೆ.ಹೆಚ್. ಮುನಿಯಪ್ಪ ಬಿಜೆಪಿ ಸೇರ್ಪಡೆಯಾಗಲು ಮಾತುಕತೆ ನಡೆಸಿದ್ದರು ಎನ್ನಲಾಗಿತ್ತು. ಆದರೆ ಈ ಕುರಿತು ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ.
