ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಬದಲ್ಲಿ ಇಂತಹ ಘಟನೆಗಳು ನಡೆದಿಲ್ಲ : ಕುಮಾರಸ್ವಾಮಿ -Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು : ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟ ಆರೋಪಿ ಆದಿತ್ಯ ರಾವ್‌ ಪೊಲೀಸರಿಗೆ ಶರಣಾಗಿದ್ದನ್ನು ನೋಡಿದರೆ ಇದು ನಾಟಕದಂತೆ ಕಾಣುತ್ತದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ಪೊಲೀಸರು ಆರೋಪಿ ಆದಿತ್ಯ ರಾವ್‌ ತಾನಾಗಿಯೇ ಬಂದು ಶರಾಣಾಗಿದ್ದಾನೆ ಎಂದು ಹೇಳುತ್ತಿದ್ದಾರೆ. ಆದರೆ ಆದಿತ್ಯ ಶರಣಾಗಿರುವುದು ನಾಟಕೀಯ ಎಂದು ನನಗನಿಸುತ್ತದೆ. ಯಾಕೆಂದರೆ ಆರೋಪಿ ಮಂಗಳೂರಿನಿಂದ ಬೆಂಗಳೂರಿಗೆ ಬಂದು ಶರಣಾಗಿದ್ದಾನೆ ಎಂದಾದರೆ ಆತನನ್ನು ಅಲ್ಲಿಗೆ ಕರೆದುಕೊಂಡು ಹೋದವರು ಯಾರು ಎಂದು ಪ್ರಶ್ನಿಸಿದರು.

ಆತ ಲಾರಿಯಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ಬಂದ ಎಂದು ಹೇಳಲಾಗುತ್ತಿದೆ. ಆದರೆ ಆತ ಪೊಲೀಸರಿಗೆ ಶರಣಾಗಲು ಮಂಗಳೂರಿನಿಂದ ಬೆಂಗಳೂರಿಗೆ ಯಾಕೆ ಬಂದ ಎಂದು ತಿಳಿಯುತ್ತಿಲ್ಲ ಎಂದು ಹೇಳಿದರು.

ಮುಸ್ಲಿಮರು ಮಾತ್ರ ಭಯೋತ್ಪಾದಕರು ಆಗುತ್ತಾರೆ ಎಂದು ಹೇಳಲಾಗುವುದಿಲ್ಲ. ಈ ಪ್ರಕರಣ ನೋಡಿದರೆ ಹಿಂದೂಗಳು ಸಹ ಭಯೋತ್ಪಾದಕರು ಆಗುವ ವಾತಾವರಣ ಇದೆ ಎಂಬುದು ತಿಳಿದು ಬರುತ್ತದೆ ಎಂದು ಬಿಜೆಪಿ ತೀರ್ಥ ಪ್ರಸಾದ ಕೊಡುತ್ತೆ. ಹಿಂದಿನಿಂದ ಭಜರಂಗದಳ ತ್ರಿಶೂಲ ಹಿಡಿದುಕೊಂಡು ಬರುತ್ತೆ ಎಂಬ ರೇಣುಕಾಚಾರ್ಯ ಹೇಳಿಕೆಗೆ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದರು.

ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಬದಲ್ಲಿ ಇಂತಹ ಘಟನೆಗಳು ನಡೆದಿಲ್ಲ. ಆದರೆ ಈಗ ಇಂತಹ ಘಟನೆ ನಡೆಯುತ್ತಿದೆ. ಈ ಘಟನೆಗಳಿಗೆ ಕಾರಣ ಯಾರು? ಇದನ್ನು ನೀವು ಹೇಗೆ ಸರಿಪಡಿಸುತ್ತಾರೆ ಎಂದು ಕೆ.ಎಸ್ ಈಶ್ವರಪ್ಪ ಅವರನ್ನು ಪ್ರಶ್ನಿಸಿದರು.

ಈ ಘಟನೆ ಬಿಜೆಪಿಯವರ ಅಪರಾಧ. ಅವರೇ ಸಮಾಜದ ನಡುವೆ ಬಿರುಕು ಸೃಷ್ಟಿ ಮಾಡಿರುವುದು. ಯಾವುದೇ ಸಮಾಜವನ್ನು ಓಲೈಕೆ ಮಾಡಲು ನಾನು ಕೆಲಸ ಮಾಡುತ್ತಿಲ್ಲ. ನಾನು ಎಲ್ಲಾ ಸಮುದಾಯದವರ ಪರವಾಗಿ ಅಂದರೆ ಜನರ ಪರವಾಗಿ ಧ್ವನಿ ಎತ್ತುತ್ತೇನೆ. ಈವರೆಗೂ ಅನ್ಯಾಯವಾದ ಸಂದರ್ಭದಲ್ಲಿ ನಾನು ಅದನ್ನು ವಿರೋಧಿಸಿ ಮಾತನಾಡಿದ್ದೇನೆ ಎಂದು ಹೇಳಿದರು.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

.