ನಾಳೆಯಿಂದ ಎಲ್ಲಾ ಬಾರ್,ಲಾಡ್ಜ್,ಕ್ಲಬ್ಗಳಲ್ಲಿ ಮದ್ಯ ಮಾರಾಟ ಆದರೆ ಕಂಡಿಷನ್ ಅಪ್ಲೈ: ಅಬಕಾರಿ ಸಚಿವ ಹೆಚ್.ನಾಗೇಶ್ vishwanews24
ನಾಳೆಯಿಂದ ಎಲ್ಲಾ ಬಾರ್,ಲಾಡ್ಜ್,ಕ್ಲಬ್ಗಳಲ್ಲಿ ಮದ್ಯ ಮಾರಾಟ ಆದರೆ ಕಂಡಿಷನ್ ಅಪ್ಲ: ಅಬಕಾರಿ ಸಚಿವ ಹೆಚ್.ನಾಗೇಶ್
ಬೆಂಗಳೂರು: ನಾಳೆಯಿಂದ ಲಾಡ್ಜ್, ಬಾರ್, ಕ್ಲಬ್ ಗಳಲ್ಲಿ ಎಂಆರ್ಪಿ ಬೆಲೆಗೆ ಮದ್ಯ ಮಾರಾಟ ಮಾಡಲು ಅನುಮತಿ ನೀಡಲಾಗಿದೆ ಎಂದು ಅಬಕಾರಿ ಸಚಿವ ಹೆಚ್. ನಾಗೇಶ್ ತಿಳಿಸಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಂಆರ್ಪಿ ಬೆಲೆಗಿಂತ ಹೆಚ್ಚಿಗೆ ಮದ್ಯ ಮಾರಾಟ ಮಾಡಿದ್ರೆ ಲೈಸನ್ಸ್ ಖಾಯಂ ರದ್ದುಗೊಳಿಸಲಾಗುವುದು, ಇದರ ಜವಬ್ದಾರಿ ಮಾಲೀಕರದ್ದಾಗಿದೆ.
ಬೆಳಿಗ್ಗೆ 9 ರಿಂದ ಸಂಜೆ 7 ಗಂಟೆ ವರೆಗೆ ಖರೀದಿ ಸಮಯ ನಿಗದಿಪಡಿಸಲಾಗಿದೆ. ಇನ್ನು ಸುಪ್ರೀಂ ಕೋರ್ಟ್ ನೀಡಿದ ಆದೇಶವನ್ನ ಗಮನಿಸಿಲ್ಲ. ಆನ್ ಲೈನ್ ಮಾರಾಟಕ್ಕೆ ಅವಕಾಶ ನೀಡಿದ್ರೆ ತಪ್ಪಿಲ್ಲ. ಮೊದಲಿಂದಲೂ ಆ ಬಗ್ಗೆ ಚರ್ಚೆ ಇತ್ತು ಎಂದರು.ರಾಜ್ಯ ಸರ್ಕಾರಕ್ಕೆ ಅಬಕಾರಿ ಇಲಾಖೆಯಿಂದ ಪ್ರತಿ ವರ್ಷ 25 ಸಾವಿರ ಕೋಟಿ ಆದಾಯ ಬರಲಿದೆ. ಈ ವರ್ಷ 2500 ಕೋಟಿ ಹೆಚ್ಚಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.
