ನಿರಂತರ ಮಳೆ ಹಿನ್ನೆಲೆ : ಜು.25ರಂದು (ನಾಳೆ)ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

Featured, ಉಡುಪಿ

ನಿರಂತರ ಮಳೆ ಹಿನ್ನೆಲೆ : ಜು.25ರಂದು (ನಾಳೆ)ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ : ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ ಶನಿವಾರ ಅಂದರೆ ಜುಲೈ 25ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ, ಪ್ರೌಢ ಶಾಲಾ, ಪದವಿ ಪೂರ್ವ, ಡಿಪ್ಲೊಮಾ, ಹಾಗೂ ಐಟಿಐ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶ ಹೊರಡಿಸಿದ್ದಾರೆ.

ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು ಜು.24ರಂದು ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ನೀಡಿತ್ತು. ಈ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜು.25ರಂದು ಉಡುಪಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿರುತ್ತದೆ. ಆದರೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿರುವುದಿಲ್ಲ.

ಕಾಲೇಜುಗಳಲ್ಲಿ ಪಾಠ ನಡೆಸುವಾಗ ಈ ಕೆಳಕಂಡ ಅಂಶಗಳನ್ನು ಪರಿಗಣಿಸುವಂತೆ ಕಾಲೇಜುಗಳ ಮುಖ್ಯಸ್ತರಿಗೆ ಹಾಗೂ ಸಂಬಂಧ ಪಟ್ಟವರಿಗೆ ಸೂಚನೆ ನೀಡಲಾಗಿದೆ:

1. ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯ ಮಾಡುವಂತಿಲ್ಲ.

2. ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವ ಸಂಧರ್ಭದಲ್ಲಿ ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ತಲುಪುವ ಬಗ್ಗೆ ಗಮನವಹಿಸುವುದು.

3. ಕಠಿಣವಾದ ದಾರಿ ಎಂದರೆ ತೋಡು, ಹಳ್ಳಗಳನ್ನು ದಾಟಿ ಬರುವ ಸಂದರ್ಭಗಳು ಇರುವಂತಹ ವಿದ್ಯಾರ್ಥಿಗಳಿಗೆ ಮನೆಯಲ್ಲಿಯೇ ಸುರಕ್ಷಿತವಾಗಿ ಇರುವಂತೆ ಸೂಚಿಚಬೇಕು.

4. ದುರ್ಬಲ/ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಕಾಲೇಜುಗಳ ಮುಖ್ಯಸ್ಥರು ಕಾಲೇಜು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು ಹಾಗೂ ಯಾವುದೇ ಅವಘಡಗಳು ಉಂಟಾಗದಂತೆ ಸೂಕ್ತ ಕ್ರಮವಹಿಸುವುದು.

5. ಈಗ ಮಳೆಗಾಗಿ, ಮುಂಜಾಗೃತ ಕ್ರಮವಾಗಿ ರಜೆಯನ್ನು ನೀಡಿ ಉಂಟಾಗಿರುವ ಕಲಿಕಾ ಸಮಯ ಕೊರತೆಯನ್ನು ಶನಿವಾರ ಮಧ್ಯಾಹ್ನ ಅಥವಾ ಭಾನುವಾರಗಳಂದು ಹೆಚ್ಚುವರಿ ತರಗತಿಗಳನ್ನು ನಡೆಸಿ ನಷ್ಟವನ್ನು ಸರಿದೂಗಿಸುವುದು.

6. ವಿದ್ಯಾರ್ಥಿಗಳ ಪೋಷಕರು/ಕಾಲೇಜು ಮುಖ್ಯಸ್ಥರು, ವಿದ್ಯಾರ್ಥಿಗಳು ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಹೋಗದಂತೆ ಜಾಗ್ರತೆ ವಹಿಸುವುದು.

7. ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗುವ ವಾಹನಗಳ ಸುರಕ್ಷತೆಯನ್ನು ನೋಡಿಕೊಳ್ಳುವುದು.

8. ಕಾಲೇಜುಗಳಲ್ಲಿ ಪ್ರಾಕೃತಿಕ ವಿಕೋಪ ನಿಭಾಯಿಸುವ ಬಗ್ಗೆ, ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡುವುದು.

ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಟೋಲ್ ಫ್ರೀ ಸಂಖ್ಯೆ 1077 ಅಥವಾ 0820-2574802(ಡಿಸಿ ಕಚೇರಿ) ಯನ್ನು ಸಂಪರ್ಕಿಸುವಂತೆ ಪ್ರಕಟಣೆ ಹೊರಡಿಸಲಾಗಿದೆ.

Leave a Reply