ನಿರೀಕ್ಷಣಾ ಜಾಮೀನು ಅರ್ಜಿ ಹಿಂಪಡೆದ ಹೆಚ್.ಡಿ.ರೇವಣ್ಣ – Vishwanews24

Featured, ರಾಜ್ಯ ನ್ಯೂಸ್

ನಿರೀಕ್ಷಣಾ ಜಾಮೀನು ಅರ್ಜಿ ಹಿಂಪಡೆದ ಹೆಚ್.ಡಿ.ರೇವಣ್ಣ

ಬೆಂಗಳೂರು: ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಾಪಸ್‌ ಪಡೆದಿದ್ದಾರೆ.

ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಇಂದು ವಿಚಾರಣೆ ನಡೆಯಿತು. ರೇವಣ್ಣ ಪರ ವಾದ ಮಂಡಿಸಿದ ವಕೀಲರು, ಬಲವಂತದ ಕ್ರಮ ಕೈಗೊಳ್ಳದಂತೆ ಮನವಿ ಮಾಡಿದರು.

ಎಸ್ಐಟಿ ಪರವಾಗಿ ಎಸ್ಪಿಪಿ ಜಗದೀಶ್ ವಾದ ಮಂಡಿಸಿ, ಸೆಕ್ಷನ್‌ 376 ಸೇರ್ಪಡೆ ಮಾಡಿಲ್ಲ. 376 ಅಲ್ಲದೆ ಬೇರೆ ಯಾವುದು ನಾನ್ ಬೇಲೆಬಲ್ ಸೆಕ್ಷನ್ ಹಾಕಲ್ಲ ಎಂದು ತಿಳಿಸಿದರು. ಈ ಹಿನ್ನೆಲೆಯಲ್ಲಿ ರೇವಣ್ಣ ಪರ ವಕೀಲರು ನಿರೀಕ್ಷಣಾ ಜಾಮೀನು ಅರ್ಜಿ ವಾಪಸ್ ಪಡೆದರು.

ನೇಹಾ ಹತ್ಯೆ ಪ್ರಕರಣ : ಇದು ಖಂಡಿತವಾಗಿಯೂ ಲವ್‌ ಜಿಹಾದ್‌ : ಅಮಿತ್ ಶಾ – Vishwanews24

Leave a Reply