ನೆಲಮಂಗಲ : ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಹೊತ್ತಿ ಉರಿದ ಖಾಸಗಿ ಬಸ್ ; ಅದೃಷ್ಟವಶಾತ್ ಪ್ರಯಾಣಿಕರು ಪಾರು – vishwanews24
ನೆಲಮಂಗಲ : ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಹೊತ್ತಿ ಉರಿದ ಖಾಸಗಿ ಬಸ್ ; ಅದೃಷ್ಟವಶಾತ್ ಪ್ರಯಾಣಿಕರು ಪಾರು
ನೆಲಮಂಗಲ: ಬೆಂಗಳೂರಿನಿಂದ ಕಲಬುರಗಿಗೆ ಹೊರಟಿದ್ದ ಖಾಸಗಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೆಂಕಿಗೆ ಆಹುತಿಯಾಗಿರುವ ಘಟನೆ ನಡೆದಿದೆ.
ತುಮಕೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರ ಹನುಮಂತಪುರ ಗೇಟ್ ಬಳಿ ಸಂಜನಾ ಟ್ರಾವೆಲ್ಸ್ಗೆ ಸೇರಿದ ಖಾಸಗಿ ಬಸ್ ಹೊತ್ತಿ ಉರಿದಿದೆ. ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಳಿಕ ನೆಲಮಂಗಲ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಕೆಲ ದಿನಗಳ ಹಿಂದೆಯಷ್ಟೇ ಬೆಂಗಳೂರಿನಿಂದ ರಾಯಚೂರಿಗೆ ಹೊರಟಿದ್ದ ಬಸ್ ಅನಂತಪುರದ ಬಳಿ ಚಲಿಸುತ್ತಿದ್ದಾಗ ಬೆಂಕಿಗೆ ಆಹುತಿಯಾದ ಘಟನೆ ನಡೆದಿತ್ತು. ಅದೃಷ್ಟವಶಾತ್ ಬಸ್ನಲ್ಲಿದ್ದ 36 ಮಂದಿ ಪ್ರಯಾಣಿಕರು ಸೇಫ್ ಆಗಿದ್ದರು. ಇದಕ್ಕೂ ಮುನ್ನ ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿದ್ದ ಸೀಬರ್ಡ್ ಸ್ಲೀಪರ್ ಬಸ್ ಬೆಂಕಿಗೆ ಆಹುತಿಯಾಗಿತ್ತು. ಈ ವೇಳೆ 29 ಜನ ಪ್ರಯಾಣಿಸುತ್ತಿದ್ದರು. ಆದ್ರೆ ಈ ಪ್ರಕರಣದಲ್ಲಿ ಪ್ರಾಣಹಾನಿ ಸಂಭವಿಸಿತ್ತು. ಇದೀಗ ಮತ್ತೊಂದು ದುರಂತ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ.
