ನೇಜಾರು ನಾಲ್ವರ ಹತ್ಯೆ ಪ್ರಕರಣ: ಸಂಜೆಯೊಳಗೆ ತನಿಖೆ ಮಾಡಿ ಪೂರ್ಣ ಚಿತ್ರಣ ಸಿಗಲಿದೆ : ಉಡುಪಿ ಎಸ್.ಪಿ. ಹೇಳಿಕೆ  – vishwanews24

Featured, ಉಡುಪಿ

 ನೇಜಾರು ನಾಲ್ವರ ಹತ್ಯೆ ಪ್ರಕರಣ: ಸಂಜೆಯೊಳಗೆ ತನಿಖೆ ಮಾಡಿ ಪೂರ್ಣ ಚಿತ್ರಣ ಸಿಗಲಿದೆ : ಉಡುಪಿ ಎಸ್.ಪಿ. ಹೇಳಿಕೆ 

ಉಡುಪಿ: ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದ ಉಡುಪಿ ನೇಜಾರಿನ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪ್ರವೀಣ್ ಅರುಣ್ ಚೌಗಲೆ ಯನ್ನು ವಶಕ್ಕೆ ಪಡೆದಿದ್ದೇವೆ ಎಂದು ಉಡುಪಿ ಎಸ್ ಪಿ ಡಾ. ಅರುಣ್ ಹೇಳಿಕೆ ನೀಡಿದ್ದಾರೆ.

ಉಡುಪಿಯಲ್ಲಿ ಮಾತನಾಡಿದ ಅವರು ನಾಲ್ವರ ಹತ್ಯೆಗೆ ಸಂಬಂಧಿಸಿ ಪ್ರವೀಣ್ ಅರುಣ್ ಚೌಗಲೆ ಯನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದೇವೆ, ಟೆಕ್ನಿಕಲ್ ಮತ್ತು ಹ್ಯೂಮನ್ ಇಂಟೆಲಿಜೆನ್ಸ್ ಮೇರೆಗೆ ಕರೆದುಕೊಂಡು ಬಂದಿ ವಿಚಾರಣೆ ನಡೆಸುತ್ತಿದ್ದೇವೆ ಸಂಜೆಯೊಳಗೆ ತನಿಖೆ ಮಾಡಿ ಪೂರ್ಣ ಚಿತ್ರಣ ಸಿಗಲಿದೆ ಎಂದು ಹೇಳಿದ್ದಾರೆ.

ಮುಂಬೈ : ಸಹರಾ ಗ್ರೂಪ್ ಸಂಸ್ಥಾಪಕ ಸುಬ್ರತ ರಾಯ್ ನಿಧನ – vishwanews24

ಉಡುಪಿ ಜಿಲ್ಲೆ ಮತ್ತು ಬೆಳಗಾವಿ ಜಿಲ್ಲೆಯ ಪೊಲೀಸರ ಸಹಕಾರದಿಂದ ಚೌಗಲೆ ಯನ್ನು ವಶಕ್ಕೆ ಪಡೆಯಲಾಗಿದ್ದು ಇದರೊಂದಿಗೆ ಹಲವಾರು ಶಂಕಿತರ ವಿಚಾರಣೆಯನ್ನೂ ಮಾಡುತ್ತಿದ್ದೇವೆ ಎಂದು ಹೇಳಿದರು.

ಘಟನೆ ಹಿನ್ನೆಲೆ ಜಿಲ್ಲೆಯ ಎಲ್ಲಾ ಕಡೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ಹೇಳಿದರು

Leave a Reply