ನೇಹಾ ಹತ್ಯೆ ಪ್ರಕರಣ: ಆರೋಪಿ ಫಯಾಸ್‌ಗೆ 14 ದಿನ ನ್ಯಾಯಾಂಗ ಬಂಧನ – Vishwanews24

Featured, ರಾಜ್ಯ ನ್ಯೂಸ್

ನೇಹಾ ಹತ್ಯೆ ಪ್ರಕರಣ: ಆರೋಪಿ ಫಯಾಸ್‌ಗೆ 14 ದಿನ ನ್ಯಾಯಾಂಗ ಬಂಧನ

ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಕಾಂಗ್ರೆಸ್‌ ಸದಸ್ಯ ನಿರಂಜನಯ್ಯ ಹಿರೇಮಠ ಅವರ ಪುತ್ರಿ ನೇಹಾ ಹತ್ಯೆ ಪ್ರಕರಣ ಸಂಬಂಧ ಆರೋಪಿ ಫಯಾಜ್ ಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪ್ರೀತಿಸಲು ನಿರಾಕರಿಸಿದ ನೇಹಾಳನ್ನು ಕೆಎಲ್‌ಇ ಬಿವಿಬಿ ಕಾಲೇಜು ಆವರಣದಲ್ಲೇ ಹಾಡಹಗಲೇ ಫಯಾಜ್ 9 ಬಾರಿ ಚಾಕುವಿನಿಂದ ಚುಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ. ಕೊಲೆ ಮಾಡಿ ಪರಾರಿಯಾಗಿದ್ದ ವಿದ್ಯಾರ್ಥ ವಿದ್ಯಾರ್ಥಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿತ್ತು.

UDUPI : ಕಾಂಗ್ರೆಸ್  ದಿವಾಳಿ ಅಂಚಿಗೆ ತಲುಪಿದ್ದು , ರಾಜ್ಯದ ಜನರಿಗೆ ಖಾಲಿ ಚೆಂಬು ನೀಡುವ ದಿನ ದೂರವಿಲ್ಲ : ಕಿದಿಯೂರು ಉದಯಕುಮಾರ್ ಶೆಟ್ಟಿ – Vishwanews24

ಕಾರ್ಪೋರೇಟರ್ ಪುತ್ರಿ ನೇಹಾ ಹಿರೇಮಠ (24) ಕೆಎಲ್‌ಇ ಬಿವಿಬಿ ಕಾಲೇಜಿನಲ್ಲಿ ಎಂಸಿಎ ಮೊದಲ ವರ್ಷದ ವಿದ್ಯಾರ್ಥಿಯಾಗಿದ್ದಳು. ಆರೋಫಿ ಫಯಾಜ್ ಅದೇ ಕಾಲೇಜಿನ ಹಳೇ ವಿದ್ಯಾರ್ಥಿ ಇಬ್ಬರು ಬಿಸಿಎ ಓದುವಾಗ ಸಹಪಾಠಿಗಳಾಗಿದ್ದರಂತೆ. ಈತ ಬಿಸಿಎನಲ್ಲಿ ಅನುತ್ತೀರ್ಣನಾಗಿದ್ದನಂತೆ. ಆದರೆ ನೇಹಾ ಉತ್ತೀರ್ಣಳಾಗಿ ಎಂಸಿಎ ಮಾಡುತ್ತಿದ್ದಳು. ಆರೋಪಿ ಬೆಳಗಾವಿ ಜಿಲ್ಲೆಯ ಸವದತ್ತಿಯ ಮೂಲದವನಾಗಿದ್ದಾನೆ.

ಗುರುವಾರ ಸಂಜೆ ತರಗತಿ ಮುಗಿಸಿಕೊಂಡು ನೇಹಾ ಮನೆಗೆ ಹಿಂತಿರುಗಿತ್ತಿದ್ದಾಗ ಕಾಲೇಜು ಕ್ಯಾಂಪಸ್‌ ಗೆ ಫಯಾಜ್‌ ಮಾಸ್ಕ್ ಹಾಕಿಕೊಂಡು ಬಂದು ಕುತ್ತಿಗೆ, ಹೊಟ್ಟೆ ಹಾಗೂ ಬೆನ್ನಿಗೆ ಬರೋಬ್ಬರಿ 9 ಬಾರಿ ಇರಿದು ಚಾಕು ಅಲ್ಲೇ ಎಸೆದು ಪರಾರಿಯಾಗಿದ್ದಾನೆ. ತಕ್ಷಣ ಪೊಲೀಸರು ಅಲರ್ಟ್ ಆಗಿದ್ದು, ಕಿಮ್ಸ್‌ ಹಿಂಬದಿಯಲ್ಲಿ ಅವಿತುಕೊಂಡಿದ್ದ ಫಯಾಜ್‌ನನ್ನು ಬಂಧಿಸಿ ಇಂದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಅವಳಿ ಮಕ್ಕಳನ್ನು ಕೊಂದ ತಾಯಿ ; ತನಿಖೆ ವೇಳೆ ಆತಂಕಕಾರಿ ಸಂಗತಿ ಬಹಿರಂಗ – Vishwanews24

 

Leave a Reply