ನ.7 ರವರೆಗೆ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ – vishwanews24

Featured, ಉಡುಪಿ

ನ.7 ರವರೆಗೆ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆದೇಶ

ಉಡುಪಿ: ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನ.3ರ ಬೆಳಗ್ಗೆ 6 ಗಂಟೆಯಿಂದ ನ.7ರ ಬೆಳಗ್ಗೆ 10 ಗಂಟೆಯವರೆಗೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ–2023ರ ಕಲಂ 163ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಆಗಿರುವ ಸ್ವರೂಪ ಟಿ.ಕೆ. ಆದೇಶ ಹೊರಡಿಸಿದ್ದಾರೆ

ಈ ಅವಧಿಯಲ್ಲಿ ಅನುಮತಿಯಿಲ್ಲದೆ ಸಭೆ, ಮೆರವಣಿಗೆ, ಪ್ರತಿಭಟನೆ ಹಾಗೂ ಇತರ ಸಾರ್ವಜನಿಕ ಕಾರ್ಯಕ್ರಮ ಗಳನ್ನು ನಡೆಸುವುದಕ್ಕೆ ನಿರ್ಬಂಧ ವಿಧಿಸಲಾಗಿದೆ. ಐದು ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪುಗೂಡುವುದು, ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವ ಚಟುವಟಿಕೆಗಳಲ್ಲಿ ತೊಡಗುವುದು, ಪ್ರಚೋದನಕಾರಿ ಭಾಷಣ ಅಥವಾ ಘೋಷಣೆಗಳನ್ನು ಕೂಗುವುದು ಹಾಗೂ ಅಪಾಯಕಾರಿ ವಸ್ತುಗಳನ್ನು ಕೊಂಡೊಯ್ಯುವುದು ಮತ್ತು ಸಂಗ್ರಹಿಸುವುದನ್ನು ನಿಷೇಧಿಸಲಾಗಿದೆ.

ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ : ಸಂತ್ರಸ್ತೆಯ ವಿರುದ್ಧ ಅಪಪ್ರಚಾರ ಮಾಡಿದ 150 ಸಾಮಾಜಿಕ ಜಾಲತಾಣ ಖಾತೆಗಳ ವಿರುದ್ಧ ಕ್ರಮ : ಉಡುಪಿ ಎಸ್ಪಿ ಎಚ್ಚರಿಕೆ – vishwanews24

ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಈ ಆದೇಶ ಹೊರಡಿಸ ಲಾಗಿದ್ದು, ಸಾರ್ವಜನಿಕರು ಆದೇಶವನ್ನು ಪಾಲಿಸುವಂತೆ ಸೂಚಿಸಲಾಗಿದೆ.

Leave a Reply